ಹಾಸನ ಅಶ್ಲೀಲ ವಿಡಿಯೋ ಪ್ರಕರಣ: ಉಪ್ಪು ತಿಂದವನು ನೀರು ಕುಡಿಯಲೇಬೇಕು ಎಂದ ಹೆಚ್‌.ಡಿ ಕುಮಾರಸ್ವಾಮಿ

ಬೆಂಗಳೂರು: ಹಾಸನದಲ್ಲಿ ಹರಿದಾಡುತ್ತಿರುವ ಅಶ್ಲೀಲ ವಿಡಿಯೋ ವೈರಲ್ ಪ್ರಕರಣ ರಾಜ್ಯ ರಾಜಕೀಯದಲ್ಲಿ ಅತಿ ದೊಡ್ಡ ಸಂಚಲನ ಸೃಷ್ಟಿಸಿದ್ದು, ಉಪ್ಪು ತಿಂದವನು ನೀರು ಕುಡಿಯಲೇಬೇಕು ಎಂದು ಮಾಜಿ ಸಿಎಂ ಹೆಚ್‌.ಡಿ ಕುಮಾರಸ್ವಾಮಿ ಅವರು ಈ ಬಗ್ಗೆ ಎಚ್ಚರಿಕೆ ನೀಡಿದ್ದಾರೆ.

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ಪ್ರಕರಣವನ್ನು ರಾಜ್ಯ ಸರ್ಕಾರ ಎಸ್‌ಐಟಿ ತನಿಖೆಗೆ ನೀಡಿ ಮಹತ್ವದ ಆದೇಶ ನೀಡಿದೆ. ಈ ಕುರಿತು ಪ್ರತಿಕ್ರಿಯಿಸಿದ ಹೆಚ್‌.ಡಿ ಕುಮಾರಸ್ವಾಮಿ ಅವರು ನಾನಾಗಲಿ ದೇವೇಗೌಡ್ರಾಗಲಿ ಎಂದೂ ಸಹ ಹೆಣ್ಣು ಮಕ್ಕಳ ವಿಚಾರದಲ್ಲಿ ಅತ್ಯಂತ ಗೌರವಯುತವಾಗಿ ನಡೆದುಕೊಂಡಿದ್ದೇವೆ. ಯಾರಾದರೂ ಕಷ್ಟ ಹೇಳಿಕೊಂಡು ಬಂದರೆ ಅವರ ಕಷ್ಟ ಪರಿಹರಿಸಿ ಕಳುಹಿಸಿದ್ದೇವೆ. ನಾವಂತೂ ಮಹಿಳೆಯರಿಗೆ ಅತ್ಯಂತ ಹೆಚ್ಚಿನ ಗೌರವ ನೀಡಿದ್ದೇವೆ ಎಂದರು.

ಚುನಾವಣೆ ಸಂದರ್ಭದಲ್ಲಿ ಹಾಸನದ ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ವಿಡಿಯೋ ವೈರಲ್ ಆಗಿದೆ. ಈ ಬಗ್ಗೆ ಎಸ್ಐಟಿ ತನಿಖೆಗೆ ಈಗಾಗಲೇ ಸರ್ಕಾರ ಆದೇಶ ಮಾಡಿದೆ. ಎಸ್‌ಐಟಿ ತನಿಖೆಯಿಂದ ವಾಸ್ತವಾಂಶ ಹೊರಗೆ ಬರಲಿ. ಈ ನೆಲದ ಕಾನೂನಿನಲ್ಲಿ ಯಾರೇ ತಪ್ಪು ಮಾಡಿದರು ಉಪ್ಪು ತಿಂದವರು ನೀರು ಕುಡಿಯಲೇಬೇಕು. ನಾವಂತೂ ಯಾವುದಕ್ಕೂ ತಪ್ಪು ಮಾಡಿದ ವಿಷಯದಲ್ಲಿ ಯಾರಿಗೂ ಕ್ಷಮಿಸುವ ಪ್ರಶ್ನೆಯಿಲ್ಲ. ತನಿಖೆಯ ವರದಿ ಸಂಪೂರ್ಣ ಹೊರಗೆ ಬರಲಿ ಬಂದ ನಂತರ ಮಾತನಾಡುತ್ತೇನೆ ಎಂದು ಹೆಚ್‌ಡಿಕೆ ಹೇಳಿದ್ದಾರೆ.

ಇದೇ ವೇಳೆ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರು ವಿದೇಶಕ್ಕೆ ಹೋಗಿದ್ದಾರೆ ಎನ್ನಲಾದ ಪ್ರಶ್ನೆಗೆ ಹೆಚ್.ಡಿ ಕುಮಾರಸ್ವಾಮಿ ಅವರು ಪ್ರತಿಕ್ರಿಯಿಸಿದ್ದಾರೆ. ಪ್ರಜ್ವಲ್ ರೇವಣ್ಣ ಅವರು ವಿದೇಶಕ್ಕೆ ಹೋಗಿದ್ದಾರೆ ಎನ್ನುವುದು ನನಗೆ ಗೊತ್ತಿಲ್ಲ. ಅದು ನನಗೆ ಸಂಬಂಧ ಪಟ್ಟಿಲ್ಲ. ಸರ್ಕಾರ ಎಸ್‌ಐಟಿ ತನಿಖೆಗೆ ಆದೇಶ ಮಾಡಿದ್ದಾರೆ. ಅವರು ವಿದೇಶಕ್ಕೆ ಹೋಗಿದ್ದರೂ ಕರೆದುಕೊಂಡು ಬರುವ ಜವಾಬ್ದಾರಿ ಅವರದ್ದು. ಅವರು ಕರೆದುಕೊಂಡು ಬರ್ತಾರೆ. ಅದರ ಬಗ್ಗೆ ತಲೆ ಕೆಡಿಸಿಕೊಳ್ಳಬೇಡಿ ಎಂದು ಹೆಚ್‌.ಡಿ ಕುಮಾರಸ್ವಾಮಿ ಹೇಳಿದರು.

Chaitra Kulal

Recent Posts

ಜಾಗದ ತಕರಾರು: ನಗರಸಭಾ ಸದಸ್ಯನಿಂದ ದಂಪತಿ ಮೇಲೆ ಹಲ್ಲೆ, ಜೀವಬೆದರಿಕೆ

ಜಾಗದ ತಕರಾರಿಗೆ ಸಂಬಂಧಿಸಿ ದಂಪತಿ ಮೇಲೆ ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿರುವ ಬಗ್ಗೆ ನಗರಸಭಾ ಸದಸ್ಯ ಬಾಲಕೃಷ್ಣ ಶೆಟ್ಟಿ…

1 min ago

ಬೊಳ್ನಾಡು ಶ್ರೀ ಚಿರುಂಭ ಭಗವತೀ ಕ್ಷೇತ್ರ : ದ್ವಜ ಸ್ತಂಭ (ಕೊಡಿಮರ) ಪ್ರತಿಷ್ಠಾಪನೆ

ತೀಯಾ ಸಮುದಾಯದ ಹದಿನೆಂಟು ಭಗವತೀ ಕ್ಷೇತ್ರಗಳಲ್ಲಿ ಒಂದಾದ ಬೊಳ್ನಾಡು ಶ್ರೀ ಚಿರುಂಭ ಭಗವತೀ ಕ್ಷೇತ್ರ ಎರುಂಬು - ಅಳಿಕೆ ಬಂಟ್ವಾಳ…

13 mins ago

ಭಾರೀ ಗಾಳಿ ಮಳೆ: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

ಸಂಜೆ ಸುರಿದ ಜೋರಾದ ಮಳೆಗೆ ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ರಾಷ್ಟ್ರೀಯ ಹೆದ್ದಾರಿಯ ಕಲ್ಲಡ್ಕ ಸಮೀಪದ ಕುದ್ರೆಬೆಟ್ಟು ಎಂಬಲ್ಲಿ ಪಲ್ಟಿಯಾದ…

16 mins ago

ದ.ಕ ಬರ ಪರಿಸ್ಥಿತಿ ಹಿನ್ನಲೆ ನೀರು ಪೂರೈಕೆಗೆ ಜಿಲ್ಲಾಡಳಿತ ಮುಂಜಾಗೃತ ಕ್ರಮ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬರ ಪರಿಸ್ಥಿತಿ ಹಿನ್ನಲೆಯಲ್ಲಿ ಸಾರ್ವಜನಿಕರಿಗರ ಕುಡಿಯುವ ನೀರನ್ನು ಪೂರೈಸಲು ಜಿಲ್ಲಾಡಳಿತದಿಂದ ಈಗಾಗಲೇ ಸಾಕಷ್ಟು ಕ್ರಮ ಕೈಗೊಳ್ಳಲಾಗುತ್ತಿದೆ.…

22 mins ago

ಕಲ್ಲಡ್ಕದಲ್ಲಿ ಪ್ರಥಮ ಮಳೆಗೆ ಹದಗೆಟ್ಟ ರಾಷ್ಟ್ರೀಯ ಹೆದ್ದಾರಿ : ಸಂಚಾರ ಅಸ್ತವ್ಯಸ್ತ

ನಿನ್ನೆ ಸುರಿದ ಪ್ರಥಮ ಮಳೆಗೆ ಕಲ್ಲಡ್ಕದಲ್ಲಿ ರಾಷ್ಟ್ರೀಯ ಹೆದ್ದಾರಿ ಸಂಪೂರ್ಣ ಹದಗೆಟ್ಟಿದ್ದು ವಾಹನ ಸಂಚಾರಕ್ಕೆ ತೊಡುಕುಂಟಾಗಿದೆ.

28 mins ago

ಡಾಲರ್‌ ಮೌಲ್ಯದ ಚಿನ್ನ ದರೋಡೆ ಪ್ರಕರಣ: ಭಾರತೀಯ ಮೂಲದ ವ್ಯಕ್ತಿ ಬಂಧನ

ಕೆನಡಾದಲ್ಲಿ ಬಹುಕೋಟಿ ಡಾಲರ್‌ ಮೌಲ್ಯದ ಚಿನ್ನ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾರತೀಯ ಮೂಲದ ವ್ಯಕ್ತಿಯನ್ನು ಟೊರೊಂಟೋ ವಿಮಾನ ನಿಲ್ದಾಣದಲ್ಲಿ ಅರೆಸ್ಟ್‌…

41 mins ago