ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲುಪಾಲಾಗಿರುವ ನಟ ದರ್ಶನ್‌ ಸಲ್ಲಿಸಿದ್ದ ರಿಟ್‌ ಅರ್ಜಿಯನ್ನು ಹೈಕೋರ್ಟ್‌ ಜುಲೈ 18ಕ್ಕೆ ಮುಂದೂಡಿದೆ.

ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್‌ ತಮಗೆ ಊಟ, ಹಾಸಿಗೆ, ಪುಸ್ತಕಗಳನ್ನು ಮನೆಯಿಂದ ಪಡೆಯಲು ಅನುಮತಿ ಕೋರಿ ಜೈಲು ಅಧಿಕಾರಿಗಳಿಗೆ ನಿರ್ದೇಶನ ಕೋರಿ ಹೈಕೋರ್ಟ್‌ ಗೆ ನಟ ದರ್ಶನ್‌ ಅವರು ರಿಟ್‌ ಅರ್ಜಿ ಸಲ್ಲಿಸಿದ್ದಾರೆ.

ಇಂದು ಹೈಕೋರ್ಟ್‌ ನ್ಯಾಯಮೂರ್ತಿ ಎಸ್.‌ ಆರ್.ಕೃಷ್ಣಕುಮಾರ್‌ ಅವರು ರಿಟ್‌ ಅರ್ಜಿ ವಿಚಾರಣೆ ನಡೆಸಿದ್ದು, ರಿಟ್‌ ಅರ್ಜಿwrit-petition ವಿಚಾರಣೆಯನ್ನು ಜುಲೈ 18 ಕ್ಕೆ ಮುಂದೂಡಿದ್ದಾರೆ.