Bengaluru 30°C

ಮುಡಾ ಹಗರಣ ಕೇಸ್;‌ ಸಿಎಂ ಸಿದ್ದುಗೆ ತಾತ್ಕಾಲಿಕ ರಿಲೀಫ್ ನೀಡಿದ ಹೈಕೋರ್ಟ್

Cm (2)

ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೈಕೋರ್ಟಿಗೆ 712 ಪುಟಗಳ ರಿಟ್ ಅರ್ಜಿ ಸಲ್ಲಿಸಿದ್ದರು.


ಇದೀಗ ಹೈಕೋರ್ಟ್ ನಲ್ಲಿ ಈ ಒಂದು ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ನಾಗಪ್ರಸನ್ನ ಅವರು ಆಗಸ್ಟ್ 29ರ ವರೆಗೆ ವಿಚಾರಣೆಯನ್ನು ಮುಂದೂಡಬೇಕು ಎಂದು ಜನಪ್ರತಿನಿಧಿಗಳ ವಿಶೇಷ ಕೋರ್ಟಿಗೆ ಸೂಚನೆ ಕೊಟ್ಟಿದ್ದಾರೆ.


ಹೌದು. . ಹೈಕೋರ್ಟ್ ನಲ್ಲಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ರಿಟ್ ಅರ್ಜಿ ವಿಚಾರಣೆ ಆರಂಭಿಸಿದ ಬಳಿಕ ಸಿಎಂ ಸಿದ್ದರಾಮಯ್ಯ ಪರವಾಗಿ ಅಭಿಷೇಕ್ ಮನುಸಿಂಗ್ವಿ ವಾದ ಮಂಡಿಸುತ್ತಿದ್ದು, ಇನ್ನೂ ರಾಜ್ಯಪಾಲರ ವಿಶೇಷ ಕಾರ್ಯದರ್ಶಿ ಪರ ವಕೀಲ ತುಷಾರ ಮೆಹ್ತಾ ವಾದ ಮಂಡಿಸಿದರು.


Nk Channel Final 21 09 2023