ಬೆಂಗಳೂರು: ನಾಳೆ ಬೆಂಗಳೂರು ಬಂದ್ಗೆ ಸಂಘಟನೆಗಳು ಕರೆ ಹಿನ್ನೆಲೆ ಮುನ್ನೆಚ್ಚರಿಕೆ ಕ್ರಮ ಕೋರಿ ಸಾಮಾಜಿಕ ಕಾರ್ಯಕರ್ತ ರವಿಕುಮಾರ್ ಕಂಚನಹಳ್ಳಿ ಸಲ್ಲಿಸಿದ್ದ ಮಧ್ಯಂತರ ಅರ್ಜಿಯನ್ನು ಹೈಕೋರ್ಟ್ ಇತ್ಯರ್ಥಪಡಿಸಿದೆ. ಬಂದ್ಗೆ ಕೈಗೊಂಡ ಕ್ರಮದ ಬಗ್ಗೆ ಸರ್ಕಾರದ ಮಾಹಿತಿ ಕೇಳಿದ ಹೈಕೋರ್ಟ್, ಪ್ರತಿಭಟನಾ ಮೆರವಣಿಗೆ, ರ್ಯಾಲಿ ನಡೆಸಲು ಅನುಮತಿ ಕೊಟ್ಟಿಲ್ಲ.
ಫ್ರೀಡಂಪಾರ್ಕ್ನಲ್ಲಿ ಮಾತ್ರ ಶಾಂತಿಯುತ ಪ್ರತಿಭಟನೆಗೆ ಅವಕಾಶವಿದೆ. ಸಂಚಾರಕ್ಕೆ ಸಮಸ್ಯೆ ಆಗದಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಸರ್ಕಾರ ಪರ ಎಜಿ ಶಶಿಕಿರಣ್ ಶೆಟ್ಟಿ ಮಾಹಿತಿ ನೀಡಿದ್ದಾರೆ.
ಸಂಘಟನೆಗಳು ರಸ್ತೆ ಮೂಲಕ ಮೆರವಣಿಗೆ ನಡೆಸಲಿವೆ. ಜನಸಾಮಾನ್ಯರ ಪ್ರಯಾಣಕ್ಕೆ ತೊಂದರೆಯಾಗುವ ಸಾಧ್ಯತೆ ಇದೆ ಎಂದು ಹೈಕೋರ್ಟ್ ಅರ್ಜಿದಾರರ ಪರ ವಕೀಲ ಜಿ.ಆರ್.ಮೋಹನ್ ಮಾಹಿತಿ ನೀಡಿದ್ದಾರೆ. ಸಾರ್ವಜನಿಕರು ಹಾಗೂ ಸರ್ಕಾರಿ ಸ್ವತ್ತು ರಕ್ಷಣೆ ಸರ್ಕಾರದ ಕರ್ತವ್ಯವಾಗಿದ್ದು, ಸರ್ಕಾರದ ಹೇಳಿಕೆ ದಾಖಲಿಸಿಕೊಂಡ ಹೈಕೋರ್ಟ್ ಅರ್ಜಿ ಇತ್ಯರ್ಥಪಡಿಸಿದೆ.