News Karnataka Kannada
Monday, April 22 2024
Cricket
ಬೆಂಗಳೂರು

‘ಬೋರ್ಡ್ ಪರೀಕ್ಷೆ’ ರದ್ದು ವಿಚಾರ: ತೀರ್ಪು ಕಾಯ್ದಿರಿಸಿದ ಹೈಕೋರ್ಟ್

ರಾಜ್ಯ ಶಾಲಾ ಶಿಕ್ಷಣ ಇಲಾಖೆ ನಿಗದಿ ಪಡಿಸಿದ್ದಂತ 5, 8 ಮತ್ತು 9ನೇ ತರಗತಿ ಬೋರ್ಡ್ ಪರೀಕ್ಷೆಯನ್ನು ಹೈಕೋರ್ಟ್ ಬಳಿಕ, ಸುಪ್ರೀಂ ಕೋರ್ಟ್ ರದ್ದುಪಡಿಸಿತ್ತು. ಆದರೆ ಹೈಕೋರ್ಟ್ ಗೆ ಬೋರ್ಡ್ ಪರೀಕ್ಷೆಗೆ ಅನುಮತಿ ಕೋರಿ ಪೋಷಕರು ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ನಡೆಸಿತ್ತು. ಈ ಬಳಿಕ ರಾಜ್ಯ ಸರ್ಕಾರದ ಮೇಲ್ಮನವಿ ವಿಚಾರಣೆಯ ಹಿನ್ನಲೆಯಲ್ಲಿ ತೀರ್ಪನ್ನು ಕಾಯ್ದಿರಿಸಿದೆ.
Photo Credit : NewsKarnataka

ಬೆಂಗಳೂರು: ರಾಜ್ಯ ಶಾಲಾ ಶಿಕ್ಷಣ ಇಲಾಖೆ ನಿಗದಿ ಪಡಿಸಿದ್ದಂತ 5, 8 ಮತ್ತು 9ನೇ ತರಗತಿ ಬೋರ್ಡ್ ಪರೀಕ್ಷೆಯನ್ನು ಹೈಕೋರ್ಟ್ ಬಳಿಕ, ಸುಪ್ರೀಂ ಕೋರ್ಟ್ ರದ್ದುಪಡಿಸಿತ್ತು. ಆದರೆ ಹೈಕೋರ್ಟ್ ಗೆ ಬೋರ್ಡ್ ಪರೀಕ್ಷೆಗೆ ಅನುಮತಿ ಕೋರಿ ಪೋಷಕರು ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ನಡೆಸಿತ್ತು. ಈ ಬಳಿಕ ರಾಜ್ಯ ಸರ್ಕಾರದ ಮೇಲ್ಮನವಿ ವಿಚಾರಣೆಯ ಹಿನ್ನಲೆಯಲ್ಲಿ ತೀರ್ಪನ್ನು ಕಾಯ್ದಿರಿಸಿದೆ.

ಶಾಲಾ ಶಿಕ್ಷಣ ಇಲಾಖೆ ನಿಗದಿ ಪಡಿಸಿದ್ದಂತ 5, 8 ಮತ್ತು 9ನೇ ತರಗತಿ ಬೋರ್ಡ್ ಪರೀಕ್ಷೆ ರದ್ದು ಕೋರಿ ಖಾಸಗಿ ಶಾಲೆಗಳ ಸಂಘ ಹೈಕೋರ್ಟ್ ಮೆಟ್ಟಿಲೇರಿದ್ದವು. ಈ ಅರ್ಜಿ ವಿಚಾರಣೆ ನಡೆಸಿದ ಏಕ ಸದಸ್ಯ ನ್ಯಾಯಪೀಠವು ಬೋರ್ಡ್ ಪರೀಕ್ಷೆಯನ್ನು ರದ್ದುಗೊಳಿಸಿ ಆದೇಶಿಸಿತ್ತು. ಈ ಆದೇಶವನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ವಿಭಾಗಿಯ ನ್ಯಾಯಪೀಠಕ್ಕೆ ಮೇಲ್ಮನವಿ ಸಲ್ಲಿಸಲಾಗಿತ್ತು. ಈ ಅರ್ಜಿಯನ್ನು ವಿಚಾರಣೆ ನಡೆಸಿದ ಹೈಕೋರ್ಟ್, 5, 8 ಮತ್ತು 9ನೇ ತರಗತಿ ಬೋರ್ಡ್ ಪರೀಕ್ಷೆ ನಡೆಸಲು ಗ್ರೀನ್ ಸಿಗ್ನಲ್ ನೀಡಿತ್ತು.

ಆದರೆ ಹೈಕೋರ್ಟ್ ನ್ಯಾಯಪೀಠದ ಆದೇಶವನ್ನು ಪ್ರಶ್ನಿಸಿ ಖಾಸಗಿ ಶಾಲೆಗಳ ಸಂಘದಿಂದ ಸುಪ್ರೀಂ ಮೊರೆ ಹೋಗಲಾಗಿತ್ತು. ಈ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ನ್ಯಾಯಪೀಠವು ಬಾಕಿ ಇರುವಂತಹ 5, 8 ಮತ್ತು 9ನೇ ತರಗತಿ ಬೋರ್ಡ್ ಪರೀಕ್ಷೆಗೆ ತಡೆಯಾಜ್ಞೆ ನೀಡಿ ಆದೇಶಿಸಿತ್ತು. ಹೀಗಾಗಿ ಶಾಲಾ ಶಿಕ್ಷಣ ಇಲಾಖೆಯಿಂದ ಬೋರ್ಡ್ ಪರೀಕ್ಷೆಯನ್ನು ಮುಂದೂಡಿ ಆದೇಶ ಕೂಡ ಮಾಡಲಾಗಿತ್ತು.

ಈ ಬೆನ್ನಲ್ಲೇ ಇಂದು ಬೋರ್ಡ್ ಪರೀಕ್ಷೆಗೆ ಅನುಮತಿ ಕೋರಿ ಪೋಷಕರಿಂದ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಲಾಗಿತ್ತು. ಸುಪ್ರೀಂ ಮೇಲ್ಮನವಿ ವಿಚಾರಣೆ ಪೂರ್ಣಗೊಳಿಸುವಂತೆ ಸೂಚಿಸಿದ ಸೂಚನೆಯಂತೆ ವಿಚಾರಣೆಯನ್ನು ಪೂರ್ಣಗೊಳಿಸಿತ್ತು. ರಾಜ್ಯ ಸರ್ಕಾರದ ಮೇಲ್ಮನವಿ ವಿಚಾರಣೆ ಬಾಕಿಯಿರುವ ಕಾರಣ, ತನ್ನ ತೀರ್ಪನ್ನು ಇಂದು ಕಾಯ್ದಿರಿಸಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
53230
Newskarnataka

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು