ಮತದಾನ ಮಾಡಿದವರಿಗೆ ಹೋಟೆಲ್‌ಗಳಲ್ಲಿ ಉಚಿತ ಊಟ; ಹೈಕೋರ್ಟ್‌ ಅನುಮತಿ

ಬೆಂಗಳೂರು: ಲೋಕಸಭೆ ಚುನಾವಣೆಗೆ ಕರ್ನಾಟಕದಲ್ಲಿ ಮೊದಲ ಹಂತದ ಮತದಾನ ಏಪ್ರಿಲ್ 26ರಂದು ಶುಕ್ರವಾರ ನಡೆಯಲಿದೆ. ಆ ದಿನ ಮತದಾನ ಮಾಡಿ ಅದಕ್ಕೆ ಸಂಬಂಧಿಸಿದ ಪುರಾವೆಗಳನ್ನು ತೋರಿಸಿದವರಿಗೆ ಉಚಿತವಚವಾಗಿ ಆಹಾರ ನೀಡಲು ಬೃಹತ್ ಬೆಂಗಳೂರು ಹೊಟೇಲ್ ಅಸೋಸಿಯೇಷನ್‌ನ ಸದಸ್ಯರಿಗೆ ಕರ್ನಾಟಕ ಹೈಕೋರ್ಟ್ ಅನುಮತಿ ನೀಡಿದೆ.

ಈ ವಿಚಾರವಾಗಿ ಹೈಕೋರ್ಟ್​ ಮಂಗಳವಾರ ಮಧ್ಯಂತರ ಆದೇಶ ನೀಡಿದೆ. ಮತದಾನ ಪ್ರಮಾಣ ಹೆಚ್ಚಿಸುವ ಉದ್ದೇಶದಿಂದ ಬೆಂಗಳೂರಿನ ಕೆಲವು ಹೋಟೆಲ್​ಗಳು ಕಳೆದ ವರ್ಷ ವಿಧಾನಸಭೆ ಚುನಾವಣೆ ವೇಳೆಯೂ ಇದೇ ರೀತಿಯ ಪ್ರಯತ್ನ ಮಾಡಿದ್ದವು.

ಹೋಟೆಲ್​​ಗಳ ಸಂಘ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರು ಮಧ್ಯಂತರ ಆದೇಶ ನೀಡಿದ್ದಾರೆ.

ಅರ್ಜಿದಾರರು ಮಾದರಿ ನೀತಿ ಸಂಹಿತೆಯನ್ನು ಉಲ್ಲಂಘಿಸಬಾರದು ಎಂಬ ಷರತ್ತಿನೊಂದಿಗೆ, ಅರ್ಜಿದಾರರ ಸಂಘ ಮತ್ತು ಅದರ ಸದಸ್ಯರು 2024 ರ ಏಪ್ರಿಲ್ 26, ರಂದು ಬೆಂಗಳೂರಿನಲ್ಲಿ ಮತದಾರರಿಗೆ ಉಚಿತ ಆಹಾರವನ್ನು ವಿತರಿಸಲು ಅನುಮತಿಸಲಾಗಿದೆ ಎಂದು ನ್ಯಾಯಾಲಯ ಆದೇಶದಲ್ಲಿ ಹೇಳಿದೆ.

 

Ashitha S

Recent Posts

ಜೀನ್ಸ್ ಪ್ಯಾಂಟ್ , ಟೀ ಶರ್ಟ್‍ಗಳಲ್ಲಿ ಅಕ್ರಮ ಚಿನ್ನ ಸಾಗಾಟ: ನಾಲ್ವರು ವಶಕ್ಕೆ

ಕಸ್ಟಮ್ಸ್ ಅಧಿಕಾರಿಗಳು 1.96 ಕೋಟಿ ರೂ. ಮೌಲ್ಯದ ಚಿನ್ನವನ್ನು ವಶಕ್ಕೆ ಪಡೆದುಕೊಂಡಿರುವ ಘಟನೆ ನಗರದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ…

8 mins ago

ಆರ್‌ಸಿಬಿ vs ಸಿಎಸ್ಕೆ: ಚಾಲೆಂಜ್ ಹಾಕಿ ಖಾಕಿ ಅತಿಥಿಯಾದ ಇನ್‌ಸ್ಟಾಗ್ರಾಮ್ ಇನ್‌ಫ್ಲುಯೆನ್ಸರ್

ಶನಿವಾರ ನಡೆದ ಹೈವೋಲ್ಟೇಜ್ ಆರ್‌ಸಿಬಿ ವರ್ಸಸ್ ಸಿಎಸ್‌ಕೆ ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಅತಿಕ್ರಮ ಪ್ರವೇಶ ಮಾಡುವುದಾಗಿ ವಿಡಿಯೋ ಪೋಸ್ಟ್…

22 mins ago

ಶೂ ವ್ಯಾಪಾರಿ ಮನೆಯಿಂದ 40 ಕೋಟಿ ರೂ. ನಗದು ವಶಕ್ಕೆ

ತೆರಿಗೆ ವಂಚನೆ ಮತ್ತು ಅಕ್ರಮ ಆಸ್ತಿ ಹೊಂದಿದ್ದ ಆರೋಪದ ಮೇಲೆ ಐಟಿ ಅಧಿಕಾರಿಗಳು ಆಗ್ರಾದಲ್ಲಿ ಶೂ ವ್ಯಾಪಾರಿ ರಾಮನಾಥ್‌ ಡಂಗ್‌…

25 mins ago

ಐಪಿಎಲ್‌ ಬೆಟ್ಟಿಂಗ್‌: ಲಕ್ಷ ಲಕ್ಷ ಹಣ ಕಳೆದುಕೊಂಡು ನೇಣಿಗೆ ಶರಣು

ಐಪಿಎಲ್‌ ಬೆಟ್ಟಿಂಗ್‌ನಲ್ಲಿ ಲಕ್ಷ ಲಕ್ಷ ಹಣ ಕಳೆದುಕೊಂಡ ಯುವಕನೊಬ್ಬ ಲಾಡ್ಜ್‌ನಲ್ಲಿ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಯಚೂರಿನ…

49 mins ago

ಗೀತಾಂಜಲಿ ಸಿಲ್ಕ್, ಶಾಂತಿಸಾಗರ್ ಹೊಟೇಲ್‌ ಸಂಸ್ಥಾಪಕ ನೀರೆ ಬೈಲೂರು ಗೋವಿಂದ ನಾಯಕ್ ನಿಧನ

ಉಡುಪಿಯ ಪ್ರತಿಷ್ಠಿತ ಜವಳಿ ಮಳಿಗೆ ‘ಗೀತಾಂಜಲಿ ಸಿಲ್ಕ್’ ಮತ್ತು ಶಾಂತಿಸಾಗರ್ ಹೊಟೇಲ್‌ನ ಸಂಸ್ಥಾಪಕರಾದ ನೀರೆ ಬೈಲೂರು ಗೋವಿಂದ ನಾಯಕ್ (89)…

1 hour ago

ಸ್ಥಳೀಯ ವಾಹನಗಳಿಗೆ ಟೋಲ್ ಕಡಿತ: ಸ್ಥಳೀಯರಿಂದ ಸಾಸ್ತಾನ ಟೋಲ್ ಗೇಟ್ ಗೆ ಮುತ್ತಿಗೆ

ಕಳೆದ ಹಲವು ದಿನಗಳಿಂದ ಸ್ಥಳೀಯ ವಾಹನಗಳಿಗೆ ಫಾಸ್ಟ್ ಟ್ಯಾಗ್ ನಲ್ಲಿ ಶುಲ್ಕ ಕಡಿತವಾಗುತ್ತಿರುವುದನ್ನು ವಿರೋಧಿಸಿ ಸ್ಥಳೀಯರು ಸಾಸ್ತಾನ ಟೋಲ್ ಗೇಟ್…

1 hour ago