ಬೆಂಗಳೂರು: ವಿಧಾನಸಭಾ ಚುನಾವಣೆ ವೇಳೆ ಆಕ್ಷೇಪಾರ್ಹ ಹೇಳಿಕೆ ನೀಡಿದ್ದಾರೆಂದು ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣದಡಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಕೇಸ್ ದಾಖಲಾಗಿತ್ತು. ಆದ್ರೆ ಆ ಕೇಸ್ಗೆ ಕರ್ನಾಟಕ ಹೈಕೋರ್ಟ್ ತಡೆ ನೀಡಿದೆ.
ಮತ್ತೊಂದೆಡೆ ಬಿಜೆಪಿ ಶಾಸಕ ರಮೇಶ ಜಾರಕಿಹೊಳಿ ಅವರು ತಮ್ಮ ವಿರುದ್ಧದ ಪ್ರಕರಣವನ್ನು ರದ್ದುಕೋರುವಂತೆ ಕೋರ್ಟ್ ಮೆಟ್ಟಿಲೇರಿದ್ದಾರೆ. ಸಾಲ ಪಾವತಿಸದೆ ಸಹಕಾರಿ ಬ್ಯಾಂಕ್ಗೆ ವಂಚನೆ ಆರೋಪ ಪ್ರಕರಣವನ್ನು ರದ್ದು ಕೋರಿ ರಮೇಶ್ ಜಾರಕಿಹೊಳಿ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ.
ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಲಿಮಿಟೆಡ್ ಕಂಪನಿಗಾಗಿ 232 ಕೋಟಿ 88 ಲಕ್ಷ ರೂ. ಸಾಲ ಪಡೆದು ಪಡೆದು ಬಳಿಕ ಮರುಪಾವತಿಸದ ಹಿನ್ನೆಲೆಯಲ್ಲಿ ಅಪೆಕ್ಸ್ ಬ್ಯಾಂಕ್ ದೂರು ನೀಡಿತ್ತು. ಈ ದೂರಿನ ಅನ್ವಯ ರಮೇಶ್ ಜಾರಕಿಹೊಳಿ ವಿರುದ್ಧ ಎಫ್ಐಆರ್ ದಾಖಲಾಗಿತ್ತು.
ಕೇರಳದ ತಿರುವಾಂಕೂರು ದೇವಸ್ಥಾನ ಆಡಳಿತ ಮಂಡಳಿಯು (ಟಿಡಿಬಿ) ತನ್ನ ಸುಪರ್ದಿಯಲ್ಲಿರುವ ದೇವಾಲಯಗಳಲ್ಲಿ ಪೂಜೆಗೆ ಅರಳಿ ಹೂವು (ಒಲಿಯಾಂಡರ್-ಕಣಗಿಲು ಜಾತಿಗೆ ಸೇರಿದ…
ಸರಿ ಸುಮಾರು 50 ಕೋಟಿಗಿಂತ ಹೆಚ್ಚು ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿರುವ ಬೆಂಗಳೂರಿನ ಪ್ರತಿಷ್ಠಿತ ಮಾಲ್ಗೆ ಬಿಬಿಎಂಪಿ ಬೆಳ್ಳಂಬೆಳಗ್ಗೆಯೇ ಬೀಗ…
ಆಟವಾಡುತ್ತಿದ್ದ ಮಕ್ಕಳ ಮೇಲೆ ಎರಗಿ ಬೀದಿ ನಾಯಿಗಳು ಕಚ್ಚಿದ ಘಟನೆ ಬೆಳಗಾವಿ ನ್ಯೂ ಗಾಂಧಿನಗರದಲ್ಲಿ ನಡೆದಿದೆ.
ದೇಶವನ್ನೇ ಬೆಚ್ಚಿಬೀಳಿಸಿದ ಬಿಜೆಪಿ ಕಾರ್ಯಕರ್ತನ ಕೊಲೆ ಪ್ರಕರಣದಲ್ಲಿ ಮತ್ತೊಂದು ಬೆಳವಣಿಗೆಯಾಗಿದೆ. ಬಿಜೆಪಿ ಯುವ ಮೋರ್ಚಾ ಸದಸ್ಯ ಪ್ರವೀಣ್ ನೆಟ್ಟಾರ್ ಹತ್ಯೆ…
ಕೆಲ ದಿನಗಳ ಹಿಂದೆ ನಾಪತ್ತೆಯಾಗಿದ್ದ ವಿದ್ಯಾರ್ಥಿನಿ ಎಲಿಜಬೆತ್ ದೀಪಿಕಾ ಪೊನ್ನುರಾಜು ಅವರನ್ನು ಪೊಲೀಸರು ಸುಳ್ಯದ ಅರಂತೋಡಿನಲ್ಲಿ ಪತ್ತೆ ಹಚ್ಚಿದ್ದಾರೆ
ಐಪಿಎಲ್ ಟೂರ್ನಿಯಲ್ಲಿ ಆರ್ಸಿಬಿ ತಂಡ ಪ್ಲೇ-ಆಫ್ ಕನಸನ್ನು ಜೀವಂತವಾಗಿರಿಸಿಕೊಂಡಿದೆ. ನಿನ್ನೆ ಪಂಜಾಬ್ ಕಿಂಗ್ಸ್ ತಂಡವನ್ನು 60 ರನ್ಗಳಿಂದ ಸೋಲಿಸುವ ಮೂಲಕ,…