ಬೆಂಗಳೂರು: ಮಹಿಳೆಯರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿಗೆ ಹೈಕೋರ್ಟ್ ಬಿಗ್ ರಿಲೀಫ್ ನೀಡಿದೆ. ಗ್ಯಾರಂಟಿ ಯೋಜನೆಗಳಿಂದ ಹಳ್ಳಿ ಹೆಣ್ಣುಮಕ್ಕಳು ದಾರಿ ತಪ್ಪುತ್ತಿದ್ದಾರೆ ಎಂಬ ಹೇಳಿಕೆ ಮೂಲಕ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ವಿವಾದ ಸೃಷ್ಟಿಸಿದ್ದರು.
ಹೆಚ್.ಡಿ.ಕುಮಾರಸ್ವಾಮಿ ವಿರುದ್ಧ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡು ನೋಟೀಸ್ ಜಾರಿ ಮಾಡಿದ್ದರು.
ಮಹಿಳೆಯರ ಘನತೆ ಹಾಗೂ ಚಾರಿತ್ರ್ಯಕ್ಕೆ ಧಕ್ಕೆಯುಂಟುಮಾಡುವಂತಹ ಹೇಳಿಕೆ ನೀಡಿದ ಹಿನ್ನೆಲೆಯಲ್ಲಿ 7 ದಿನಗಳ ಒಳಗಾಗಿ ಮಹಿಳಾ ಆಯೋಗದ ಮುಂದೆ ಖುದ್ದು ಹಾಜರಾಗಿ ತಮ್ಮ ಹೇಳಿಕೆ ಬಗ್ಗೆ ಸ್ಪಷ್ಟೀಕರಣ, ವಿವರಣೆ ನೀಡುವಂತೆ ಸೂಚಿಸಿದ್ದರು.
ಇದನ್ನು ಪ್ರಶ್ನಿಸಿ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೈಕೋರ್ಟ್ ಮೆಟ್ಟಿಲೇರಿದ್ದರು. ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ಮಾಜಿ ಸಿಎಂ ಕುಮಾರಸ್ವಾಮಿ ವಿರುದ್ಧ ಮಹಿಳಾ ಆಯೋಗ ನೀಡಿದ್ದ ನೋಟೀಸ್ ಗೆ ತಡೆಯಾಜ್ಞೆ ನೀಡಿದೆ.