ಬೆಂಗಳೂರು: ರಾಜ್ಯ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಮಾಜಿ ಸಿಎಂ ಹೆಚ್ಡಿ ಕುಮಾರಸ್ವಾಮಿ ಅವರು ಕಾಂಗ್ರೆಸ್ ವಿರುದ್ದ ವರ್ಗಾವಣೆ ದಂಧೆ ಆರೋಪ ಮಾಡುತ್ತಿದ್ದಾರೆ. ಅದರ ಬೆನ್ನಲ್ಲೇ ಇದೀಗ ಮತ್ತೊಂದು ಬಾಂಬ್ ಸಿಡಿಸಿದ್ದು, ರಾಜ್ಯ ರಾಜಕಾರಣದಲ್ಲಿ ಬಾರೀ ಸಂಚಲನ ಮೂಡಿಸಿದೆ.
ಕಾಂಗ್ರೆಸ್ ಸರ್ಕಾರ ಅಧಿಕಾರಿಗಳ ವರ್ಗಾವಣೆಗೆ ಹಣವನ್ನ ನಿಗದಿ ಮಾಡಿದ್ದು, ಇಂಧನ ಇಲಾಖೆಯಲ್ಲಿ ಬರೊಬ್ಬರಿ 10 ಕೋಟಿಗೆ ಅಧಿಕಾರಿಗಳ ವರ್ಗಾವಣೆಗೆಯಾಗಿದೆ ಎಂದಿದ್ದಾರೆ.
ಇನ್ನು ವಿಧಾನಸೌಧದಲ್ಲಿ ಜೇಬಿನಿಂದ ಪೆನ್ ಡ್ರೈವ್ ತೆಗೆದು ಇದರಲ್ಲಿ ಎಲ್ಲಾ ದಾಖಲೆ ಇದೆ. ಸರಿಯಾದ ಸಮಯಕ್ಕೆ ರಿವಿಲ್ ಮಾಡ್ತೀನಿ. ನಾನು ಸುಮ್ ನುಮ್ನೇ ಚರ್ಚೆ ಮಾಡಲ್ಲ. ಎಲ್ಲವನ್ನೂ ರೆಡಿ ಮಾಡಿಟ್ಟುಕೊಂಡಿದ್ದೀನಿ ಎಂದು ಎಚ್ಚರಿಕೆ ಕೊಟ್ಟಿದ್ದಾರೆ. ಇಂಧನ ಇಲಾಖೆಯಲ್ಲಿ ಹತ್ತತ್ತು ಕೋಟಿಗೆ ವರ್ಗಾವಣೆ ಆಗಿದೆ. ಆ ಅಧಿಕಾರಿಗೆ ಒಂದು ದಿನಕ್ಕೆ ಐವತ್ತು ಲಕ್ಷ ಕಮಿಷನ್ ಹೊಡೆಯುತ್ತಾನೆ ಎಂದು ಆರೋಪ ಮಾಡಿದ್ದಾರೆ.
ನಿನ್ನೆ ಮಂಡ್ಯದಲ್ಲಿ ವರ್ಗಾವಣೆ ಆಯ್ತಲ್ಲ. ತನಿಖೆಯಾದವರನ್ನು ಸಸ್ಪೆಂಡ್ ಆದವರನ್ನು ಮತ್ತೆ ತಗೊತಾರೆ. ಲಾಟರಿ ದಂಧೆ ನಡೆಸಿದವರನ್ನು ಆಚೆ ಕಳಿಸಿದವನು ನಾನು. ನಮ್ಮಿಂದ ಬೆಳೆದವರು ನಮ್ಮ ಬಗ್ಗೆಯೇ ಮಾತಾಡ್ತಾರೆ. ವರ್ಗಾವಣೆ ದಂಧೆದೇ ಪೆನ್ ಡ್ರೈವ್ ಇದೆ ಎಂದು ವಾಗ್ದಾಳಿ ನಡೆಸಿದರು.