Ad

ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಹೆಚ್‌ಡಿ ಕುಮಾರಸ್ವಾಮಿ

ಸಂಸತ್ ಸದಸ್ಯರಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ ಚನ್ನಪಟ್ಟಣ ವಿಧಾನಸಭೆ ಕ್ಷೇತ್ರದ ಶಾಸಕ ಸ್ಥಾನಕ್ಕೆ ಹೆಚ್‌ಡಿ ಕುಮಾರಸ್ವಾಮಿ ರಾಜೀನಾಮೆ ನೀಡಿದರು. 

ಬೆಂಗಳೂರು: ಸಂಸತ್ ಸದಸ್ಯರಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ ಚನ್ನಪಟ್ಟಣ ವಿಧಾನಸಭೆ ಕ್ಷೇತ್ರದ ಶಾಸಕ ಸ್ಥಾನಕ್ಕೆ ಹೆಚ್‌ಡಿ ಕುಮಾರಸ್ವಾಮಿ ರಾಜೀನಾಮೆ ನೀಡಿದರು.

Ad
300x250 2

ವಿಧಾನಸಭೆ ಸ್ಪೀಕರ್ ಯು.ಟಿ ಖಾದರ್ ಅವರನ್ನು ಕಚೇರಿಯಲ್ಲಿ ಭೇಟಿಯಾಗಿ ಕುಮಾರಸ್ವಾಮಿ ಅವರು ರಾಜೀನಾಮೆ ಸಲ್ಲಿಸಿದರು. ರಾಜೀನಾಮೆ ಸಲ್ಲಿಸುವ ವೇಳೆ ಜಿಟಿ ದೇವೇಗೌಡ, ಭೋಜೇಗೌಡರು ಉಪಸ್ಥಿತರಿದ್ದರು.

ಲೋಕಸಭಾ ಚುನಾವಣೆಯಲ್ಲಿ ಮಂಡ್ಯದಿಂದ ಗೆದ್ದ ಕುಮಾರಸ್ವಾಮಿ ಮೋದಿ ಸಂಪುಟದಲ್ಲಿ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆಯ ಸಚಿವರಾಗಿ ನೇಮಕವಾಗಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ನನಗೆ ದೊಡ್ಡ ಜವಾಬ್ದಾರಿ ನೀಡಿದ್ದಾರೆ ಎಂದರು.

Ad
Ad
Nk Channel Final 21 09 2023
Ad