Bengaluru 24°C
Ad

ಕುಟುಂಬದ ಜೊತೆಗೆ ವಿಶ್ರಾಂತಿಗೆ ತೆರಳಿದ ಹೆಚ್‌.ಡಿ ಕುಮಾರಸ್ವಾಮಿ

ಮಾಜಿ ಮುಖ್ಯಮಂತ್ರಿ ಹೆಚ್‌.ಡಿ ಕುಮಾರಸ್ವಾಮಿಯವರು ಕುಟುಂಬದ ಜೊತೆಗೆ ತಮ್ಮ ರಾಜ್ಯದ ರೆಸಾರ್ಟ್ ಒಂದರಲ್ಲಿ ವಿಶ್ರಾಂತಿಗೆ ತೆರಳಿದ್ದಾರೆ.

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಹೆಚ್‌.ಡಿ ಕುಮಾರಸ್ವಾಮಿಯವರು ಕುಟುಂಬದ ಜೊತೆಗೆ ತಮ್ಮ ರಾಜ್ಯದ ರೆಸಾರ್ಟ್ ಒಂದರಲ್ಲಿ ವಿಶ್ರಾಂತಿಗೆ ತೆರಳಿದ್ದಾರೆ.

ಪತ್ನಿ ಅನಿತಾ ಕುಮಾರಸ್ವಾಮಿ, ಪುತ್ರ ನಿಖಿಲ್ ಕುಮಾರಸ್ವಾಮಿ, ಸೊಸೆ ರೇವತಿ ಅವರು ಹಾಗೂ ಮೊಮ್ಮಗ ಚಿ.ಅವ್ಯಾನ್ ದೇವ್ ಮಾಜಿ ಮುಖ್ಯಮಂತ್ರಿಗಳ ಜೊತೆಯಲ್ಲಿದ್ದಾರೆ.

ಈ ಸಂದರ್ಭದಲ್ಲಿ ಅವರು ಸ್ಥಳೀಯರ ಯೋಗಕ್ಷೇಮ ವಿಚಾರಿಸಿದರು.

ಲೋಸಕಭಾ ಚುನಾವಣೆಯ ಗದ್ದಲದ ಬಳಿಕ ಇದೀಗ ತಮ್ಮ ಕುಟುಂಬ ಸಮೇತ ವಿಶ್ರಾಂತಿ ಪಡೆಯುತ್ತಿದ್ದಾರೆ.

ಎರಡು ತಿಂಗಳ ಹಿಂದೆ ಹೃದಯದ ಶಸ್ತ್ರಚಿಕಿತ್ಸೆಗಾಗಿ ಹೆಚ್‌ಡಿಕೆಯವರು ಅಪೋಲೋ ಆಸ್ಪತ್ರೆಗೆ ದಾಖಲಾಗಿ ಡಿಸ್ಚಾರ್ಜ್‌ ಆಗಿದ್ದರು. ಆ ಬಳಿಕ ವೈದ್ಯರ ಸಲಹೆಯ ಮೇರೆಗೆ ಒಂದೆರಡು ದಿನ ಮನೆಯಲ್ಲಿಯೇ ವಿಶ್ರಾಂತಿ ಪಡೆದಿದ್ದರು.

 

Ad
Ad
Nk Channel Final 21 09 2023
Ad