News Karnataka Kannada
Monday, April 29 2024
ಬೆಂಗಳೂರು

ವಿದ್ಯುತ್‌ ಕಳ್ಳತನ ಆರೋಪ, ಎಚ್‌ಡಿಕೆಗೆ ಬಿತ್ತು ಭಾರಿ ದಂಡ: ದಂಡದ ಮೊತ್ತ ಎಷ್ಟು ಗೊತ್ತಾ

This government is there to protect the robbers
Photo Credit : News Kannada

ಬೆಂಗಳೂರು: ಬೆಂಗಳೂರಿನ ಜೆಪಿ ನಗರದಲ್ಲಿರುವ ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ ಅವರ ನಿವಾಸಕ್ಕೆ ದೀಪಾವಳಿ ದೀಪಾಲಂಕಾರಕ್ಕಾಗಿ ಅನಧಿಕೃತವಾಗಿ ಬೀದಿ ದೀಪದ ಕಂಬದಿಂದ ನೇರವಾಗಿ ವಿದ್ಯುತ್ ಪಡೆದಿರುವ ವಿಚಾರ ಭಾರಿ ಸುದ್ದಿಯಾಗಿತ್ತು.

ಅದೇ ರೀತಿ ಅವರ ನಿವಾಸದ ಮುಂಭಾಗ ಪೋಸ್ಟರ್‌ಗಳು ಕಾಣಿಸಿಕೊಂಡಿತ್ತು. ಬಳಿಕ ಪೋಸ್ಟರ್‌ಗಳನ್ನು ಪೊಲೀಸರು ತೆರವು ಮಾಡಿದ್ದರು. ಇದೀಗ ಜಯನಗರದ ಬೆಸ್ಕಾಂ ಜಾಗೃತ ದಳದ ಅಧಿಕಾರಿಗಳು ಮಾಜಿ ಮುಖ್ಯಮಂತ್ರಿ ಹೆಚ್​ಡಿ ಕುಮಾರಸ್ವಾಮಿ ಅವರ ಮನೆಗೆ ತೆರಳಿ ಪರಿಶೀಲನೆ ಮಾಡಿ, ಬಳಿಕ ಅವರ ವಿರುದ್ಧ ಎಫ್​ಐಆರ್ ಕೂಡ ದಾಖಲಿಸಿದ್ದರು. ಇದೀಗ ಅಕ್ರಮ ವಿದ್ಯುತ್​ ಬಳೆಕೆಯ ದಂಡವನ್ನು ಬೆಸ್ಕಾಂ ಇಲಾಖೆ ವಿಧಿಸಿದೆ.

ಇನ್ನು ಈ ಕುರಿತು ಬೆಸ್ಕಾಂ ಬೆಸ್ಕಾಂ ಜಾಗೃತಾ ದಳದ ಡಿವೈಎಸ್ ಪಿ ಅನುಷ ನೇತೃತ್ವದಲ್ಲಿ ವಿದ್ಯುತ್ ಬಳಕೆ ಕೌಂಟಿಂಗ್ ಮಾಡಿ, 10 ನಿಮಿಷಕ್ಕೆ​ ಎಷ್ಟು ವಿದ್ಯುತ್ ಬಳಕೆ ಆಗುತ್ತದೆ ಎನ್ನುವುದನ್ನು ಲೆಕ್ಕ ಮಾಡಿದ್ದರು. ಇದರಿಂದ ಎರಡು ದಿನ ಎಷ್ಟು ಬಳಕೆ ಆಗಿದೆ ಎಂಬುದರ ಲೆಕ್ಕ ತೆಗೆದು, ನ.14 ರಂದು ಅಧಿಕಾರಿಗಳು ರಿಪೋರ್ಟ್ ನೀಡಿದ್ದರು. ಇದೀಗ ಬೆಸ್ಕಾಂ ಇಲಾಖೆ ಬರೊಬ್ಬರಿ 68 ಸಾವಿರ ದಂಡ ವಿಧಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು