ಬೆಂಗಳೂರು : ಆರ್ ಸಿಬಿ ವಿಜಯೋತ್ಸವದ ವೇಳೆ ನಡೆದ ಕಾಲ್ತುಳಿತ ಪ್ರಕರಣದ ಬೆನ್ನಲ್ಲೇ ರಾಜ್ಯ ಸರ್ಕಾರ ಹೊಸ ಮಾರ್ಗಸೂಚಿಯೊಂದನ್ನು ಬಿಡುಗಡೆ ಮಾಡಿದ್ದು, ಸಾವಿರಾರು ಜನ ಸೇರುವ ಕಾರ್ಯಕ್ರಮಕ್ಕೆ ಆರೋಗ್ಯ ಇಲಾಖೆಯ ಅನುಮತಿ ಕಡ್ಡಾಯಗೊಳಿಸಲು ನಿರ್ಧರಿಸಿದೆ.

ಬೆಂಗಳೂರಿನಲ್ಲಿ ಕಾಲ್ತುಳಿತ ದುರಂತದಲ್ಲಿ 11 ಜನ ಸಾವನ್ನಪ್ಪಿದ್ದರೆ, 30ಕ್ಕೂ ಹೆಚ್ಚು ಜನ ಗಂಭೀರ ಗಾಯಗೊಂಡಿದ್ದರು. ಈ ಘಟನೆಯ ಬಳಿಕ ಎಚ್ಚೆತ್ತ ರಾಜ್ಯ ಸರ್ಕಾರ ಯಾವುದೇ ಕಾರ್ಯಕ್ರಮದಲ್ಲಿ ಸಾವಿರಕ್ಕಿಂತ ಹೆಚ್ಚಿನ ಜನ ಸೇರುವುದಾದರೆ ಅಂತಹ ಕಾರ್ಯಕ್ರಮಕ್ಕೆ ಆರೋಗ್ಯ ಇಲಾಖೆಯ ಅನುಮತಿ ಕಡ್ಡಾಯಗೊಳಿಸಲು ಪ್ಲಾನ್ ಮಾಡಿದೆ.

ಲಕ್ಷಾಂತರ ಜನ ಸೇರುವ ಕಾರ್ಯಕ್ರಮದ ಜನಸಂಖ್ಯೆಗೆ ಅನುಗುಣವಾಗಿ ಕನಿಷ್ಠ ವೈದ್ಯರು, ಸಿಬ್ಬಂದಿ ಹಾಗೂ ಐಸಿಯು ಆ್ಯಂಬುಲೆನ್ಸ್​ಗಳ ವ್ಯವಸ್ಥೆ ಇರುವಂತೆ ಮಾರ್ಗಸೂಚಿ ನೀಡಲು ಆರೋಗ್ಯ ಇಲಾಖೆಯಿಂದ ಶಿಫಾರಸ್ಸಿಗೆ ಸಚಿವರು ಮುಂದಾಗಿದ್ದಾರೆ ಎಂಬ ಮಾಹಿತಿ ತಿಳಿದು ಬಂದಿದೆ.