ಬೆಂಗಳೂರು: ರಾಜ್ಯದ ಪ್ರತಿಷ್ಠಿತ ಹೋಟೆಲ್‌ಗಳ ಮೇಲೆ ಆರೋಗ್ಯ ಇಲಾಖೆಯಿಂದ ದಿಢೀರ್ ದಾಳಿ ನಡೆದ ಬೆನ್ನಲ್ಲೇ, ಹೋಟೆಲ್‌ಗಳಲ್ಲಿ ಸಿಸಿಟಿವಿ ಹಾಗೂ ಗ್ರಾಹಕರು ದೂರು ನೀಡಲು QR ಕೋಡ್ ಸ್ಕ್ಯಾನ್ ಅಳವಡಿಸಲಾಗುವುದು ಎಂದು ಸಚಿವ ಯು.ಟಿ.ಖಾದರ್ ಹೇಳಿದ್ದಾರೆ.

ಈ ಕ್ಯೂಆರ್ ಕೋಡ್ ಆದೇಶ ಪುನರ್ ಪರಿಶೀಲಿಸುವಂತೆ ಬೆಂಗಳೂರು ಹೋಟೆಲ್ ಅಸೋಸಿಯೇಷನ್ ಆಗ್ರಹಿಸಿದೆ. ರಾಜಧಾನಿ ಹೋಟೆಲ್ ಆಹಾರ ಶುಚಿತ್ವ ಕಾಪಾಡುವ ನಿಟ್ಟಿನಲ್ಲಿ ಆರೋಗ್ಯ ಇಲಾಖೆ ಮುಂದಾಗಿದ್ದು, ಬೆಂಗಳೂರು ನಗರ ವ್ಯಾಪ್ತಿಯಲ್ಲಿ ನಿನ್ನೆಯವರೆಗೂ 60ಕ್ಕೂ ಹೆಚ್ಚು 3-ಸ್ಟಾರ್ ಮತ್ತು 5-ಸ್ಟಾರ್ ಹೋಟೆಲ್‌ಗಳು, 8 ಗೋಡೌನ್‌ಗಳು ಹಾಗೂ 4 ಎಂಟರ್‌ಪ್ರೈಸ್ ರೆಸ್ಟೋರೆಂಟ್‌ಗಳ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಲಾಗಿದೆ.

ಈ ವೇಳೆ ಹೋಟೆಲ್‌ಗಳಲ್ಲಿ ಆಹಾರ ಸುರಕ್ಷತಾ ನಿಯಮ ಪಾಲನೆ, ಆಹಾರ ಸಂಗ್ರಹಣೆ ಹಾಗೂ ಗುಣಮಟ್ಟವನ್ನು ಅಧಿಕಾರಿಗಳು ಪರಿಶೀಲಿಸಿದ್ದಾರೆ. ನೂರಾರು ಕೆಜಿ ಆಹಾರ ಪದಾರ್ಥ ವಶಪಡಿಸಿಕೊಂಡಿದ್ದು, ತಪಾಸಣೆ ವೇಳೆ ಅವಧಿ ಮೀರಿದ, ತಪ್ಪು ಲೇಬಲ್ ಹೊಂದಿರುವ ಹಾಗೂ ಅಸಮರ್ಪಕವಾಗಿ ಸಂಗ್ರಹಿಸಿದ್ದ ಹಲವು ಆಹಾರ ಪದಾರ್ಥಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಆರೋಗ್ಯ ಸಚಿವರು ಮಾಹಿತಿ ನೀಡಿದ್ದಾರೆ.

ಮಾಲೀಕರಿಗೆ ಸೂಚನೆ ನೀಡಿದ್ದಾರೆ. ಜೊತೆಗೆ ಹೋಟೆಲ್, ಮೆಡಿಕಲ್ ಸ್ಟೋರ್ ಸೇರಿದಂತೆ ಸಾರ್ವಜನಿಕರು ಭೇಟಿ ನೀಡುವ ಸ್ಥಳಗಳಲ್ಲಿ ಇನ್ಮುಂದೆ QR ಕೋಡ್ ಅಳವಡಿಸಲಾಗುವುದು ಎಂದು ಆರೋಗ್ಯ ಸಚಿವರು ಮಹತ್ವದ ಘೋಷಣೆ ಮಾಡಿದ್ದಾರೆ. ಕಿಖ ಕೋಡ್ ಸ್ಕ್ಯಾನ್ ಮಾಡುವ ಮೂಲಕ ಆಹಾರ ಗುಣಮಟ್ಟ, ಸೇವೆ ಅಥವಾ ಇತರ ಸಮಸ್ಯೆಗಳ ಬಗ್ಗೆ ಸಾರ್ವಜನಿಕರು ದೂರು ಸಲ್ಲಿಸಬಹುದಾಗಿದೆ ಎಂದು ತಿಳಿಸಿದ್ದಾರೆ.

ಹೋಟೆಲ್‌ಗಳಲ್ಲಿ ಕ್ಯೂಆರ್ ಕೋಡ್ ಅಳವಡಿಸುವ ಬಗ್ಗೆ ಬೃಹತ್ ಬೆಂಗಳೂರು ಹೋಟೆಲ್ ಅಸೋಸಿಯೇಷನ್ ಕಳವಳ ವ್ಯಕ್ತಪಡಿಸಿದೆ. ತನ್ನ ಸಂಘದ ಸದಸ್ಯರ ಜೊತೆ ಚರ್ಚಿಸಲಾಗುವುದು ಎಂದು ತಿಳಿಸಿದೆ. ಸರ್ಕಾರ ಈ ಆದೇಶವನ್ನು ಪುನರ್ ಪರಿಶೀಲಿಸುವಂತೆ ಆರೋಗ್ಯ ಸಚಿವ ಯು.ಟಿ.ಖಾದರ್ ಭೇಟಿಯಾಗಿ ಮನವಿ ಸಲ್ಲಿಸಲಾಗುವುದೆಂದು ಬೃಹತ್ ಬೆಂಗಳೂರು ಹೋಟೆಲ್ ಅಸೋಸಿಯೇಷನ್ ಅಧ್ಯಕ್ಷ ಪಿ.ಸಿ ರಾವ್ ತಿಳಿಸಿದ್ದಾರೆ.