ಬೆಂಗಳೂರು: ಮಲೆನಾಡು ಹಾಗೂ ಉತ್ತರ ಕರ್ನಾಟಕದ ಕೆಲವೆಡೆ ಉತ್ತಮ ಮಳೆಯಾಗಿದೆ. ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಭಾರೀ ಮಳೆ ಮುನ್ಸೂಚನೆ ನೀಡಲಾಗಿದೆ.
ಚಿಕ್ಕಮಗಳೂರು ಜಿಲ್ಲೆಯ ಘಾಟಿ ಪ್ರದೇಶದಲ್ಲಿ ಉತ್ತಮ ಮಳೆಯಾಗಿದ್ದು, ಚಾರ್ಮಾಡಿ ಘಾಟ್ ರಸ್ತೆಯಲ್ಲಿ ಭಾರೀ ಮಳೆಗೆ ಹಲವೆಡೆ ಧರೆ ಕುಸಿತ ಉಂಟಾಗಿ ಕಿಲೋಮೀಟರ್ ಗಟ್ಟಲೆ ಟ್ರಾಫಿಕ್ ಜಾಮ್ ಆಗಿತ್ತು. ಭಾರೀ ಮಳೆಯಿಂದಾಗಿ ಘಾಟಿ ರಸ್ತೆಯಲ್ಲಿ ಹಲವೆಡೆ ಹಳ್ಳದಂತೆ ನೀರು ರಭಸವಾಗಿ ಹರಿದು ಆತಂಕ ಸೃಷ್ಟಿಸಿತ್ತು. ಮುಂದಿನ 24 ಗಂಟೆಯಲ್ಲಿ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ

