News Karnataka Kannada
Friday, May 17 2024
ಬೆಂಗಳೂರು

ಮೂರು ಜಿಲ್ಲೆಗಳಿಗೆ ಎಲ್ಲೋ ಅಲರ್ಟ್‌, ಭಾರಿ ಮಳೆ ಎಚ್ಚರಿಕೆ

ಮೇ ತಿಂಗಳಲ್ಲಿ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಭರ್ಜರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಗುಡ್​​ನ್ಯೂಸ್​ವೊಂದನ್ನು ನೀಡಿದೆ.
Photo Credit : News Kannada

ಬೆಂಗಳೂರು: ರಾಜ್ಯದಲ್ಲಿ ಮಳೆಯಿಲ್ಲದೆ ತೀವ್ರ ಬರದ ಛಾಯೆಯಿದೆ. ಈ ನಡುವೆ ಹವಾಮಾನ ಇಲಾಖೆ ಸಂತಸದ ಸುದ್ದಿಯೊಂದನ್ನು ನೀಡಿದೆ. ರಾಜ್ಯದಲ್ಲಿ ರಾಜ್ಯದಾದ್ಯಂತ ಮುಂದಿನ ಐದು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಇಂದು (ಸೆ.30) ಗುಡುಗು, ಮಿಂಚು ಸಹಿತ ಭಾರಿ ಮಳೆಯಾಗಲಿದೆ. ಇನ್ನೂ ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ಕರಾವಳಿ ಜಿಲ್ಲೆಗಳಲಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಶನಿವಾರ ಮತ್ತು ಭಾನುವಾರ ಭಾರಿ ಮಳೆಯಾಗಲಿದ್ದು ಯೆಲ್ಲೋ ಅಲರ್ಟ್​​ ಘೋಷಿಸಿದ್ದಾರೆ.

ಉತ್ತರ ಒಳನಾಡು ಬೆಳಗಾವಿ ಮತ್ತು ಬೀದರ ಜಿಲ್ಲೆಗಳಲ್ಲಿ ಇಂದು ಧಾರಾಕಾರ ಮಳೆಯಾಗಲಿದೆ. ಇನ್ನು ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ, ಕಲಬುರ್ಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು