Bengaluru 23°C
Ad

ವರುಣನ ಅಬ್ಬರ : ಅಂಡರ್ ಪಾಸ್‌ನಲ್ಲಿ ಸಿಲುಕಿದ ಬಸ್‌, 20 ಪ್ರಯಾಣಿಕರ ರಕ್ಷಣೆ

ನಗರದಲ್ಲಿ ಭಾನುವಾರ ರಾತ್ರಿಯೂ ಮಳೆಯ ಅಬ್ಬರ ಮುಂದುವರಿದಿದ್ದು, ಹಲವೆಡೆ ಬಿರುಗಾಳಿ, ಗುಡುಗು ಸಹಿತ ಧಾರಾಕಾರವಾಗಿ ಮಳೆ ಸುರಿದಿದ್ದರಿಂದ ಪ್ರಮುಖ ರಸ್ತೆಗಳು ಜಲಾವೃತವಾಗಿ ವಾಹನ ಸವಾರರು ಪರದಾಡಿದರು. ಇನ್ನು ಕೆಲವು ಕಡೆ ಬೃಹತ್‌ ಮರಗಳು ನೆಲಕ್ಕುರುಳಿದ್ದು, ತಗ್ಗು ಪ್ರದೇಶಗಳಲ್ಲಿನ ಮನೆಗಳಿಗೆ ನೀರು ನುಗ್ಗಿದ್ದರಿಂದ ಜನರು ಪರದಾಡಿದರು.

ಬೆಂಗಳೂರು: ನಗರದಲ್ಲಿ ಭಾನುವಾರ ರಾತ್ರಿಯೂ ಮಳೆಯ ಅಬ್ಬರ ಮುಂದುವರಿದಿದ್ದು, ಹಲವೆಡೆ ಬಿರುಗಾಳಿ, ಗುಡುಗು ಸಹಿತ ಧಾರಾಕಾರವಾಗಿ ಮಳೆ ಸುರಿದಿದ್ದರಿಂದ ಪ್ರಮುಖ ರಸ್ತೆಗಳು ಜಲಾವೃತವಾಗಿ ವಾಹನ ಸವಾರರು ಪರದಾಡಿದರು. ಇನ್ನು ಕೆಲವು ಕಡೆ ಬೃಹತ್‌ ಮರಗಳು ನೆಲಕ್ಕುರುಳಿದ್ದು, ತಗ್ಗು ಪ್ರದೇಶಗಳಲ್ಲಿನ ಮನೆಗಳಿಗೆ ನೀರು ನುಗ್ಗಿದ್ದರಿಂದ ಜನರು ಪರದಾಡಿದರು.

ಶೇಷಾದ್ರಿಪುರಂ ಅಂಡರ್ ಪಾಸ್‌ನ ನೀರಿನಲ್ಲಿ ಬಿಎಂಟಿಸಿ ಬಸ್ ಸಿಲುಕಿದ್ದು, 20 ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ. ಬಸ್ ಮುಂದೆ ಮೂವ್ ಆಗ್ತಿದ್ದಂತೆ, ಅಪಾಯದ ಮುನ್ಸೂಚನೆ ಅರಿತು ಬಸ್ ಚಾಲಕ ಅಲ್ಲೇ ನಿಲ್ಲಿಸಿದ್ದಾರೆ. ನಂತರ ಬಸ್‌ನಲ್ಲಿದ್ದವರನ್ನು ಸ್ಥಳೀಯ ವ್ಯಕ್ತಿ ಮಣಿಕಂಠ ಹೊರ ಕರೆತಂದಿದ್ದಾರೆ. ಓರ್ವ ವೃದ್ಧೆ, ಇಬ್ಬರು ಮಹಿಳೆಯರು, ಮಗುವನ್ನು ಬಸ್‌ನಿಂದ ರಕ್ಷಣೆ ಮಾಡಲಾಗಿದೆ.

Ad
Ad
Nk Channel Final 21 09 2023
Ad