ಬೆಂಗಳೂರು : ಸಂಕ್ರಾಂತಿಗೆ ರಾಜ್ಯದ ವಿವಿಧ ಭಾಗಗಳಲ್ಲಿ ಭಾರಿ ಮಳೆ ಸುರಿಯುವ ನಿರೀಕ್ಷೆ ಇದೆ. ಈ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ. ಬೆಂಗಳೂರು ಸೇರಿದಂತೆ ಹಲವೆಡೆ ಚಳಿ ಸಹ ಹೆಚ್ಚಾಗಲಿದೆ ಎಂದು ಅಂದಾಜಿಸಲಾಗಿದೆ.
ಬೆಂಗಳೂರು ಸೇರಿ ದಕ್ಷಿಣ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಈಗಾಗಲೇ ಮೋಡ ಕವಿದ ವಾತಾವರಣ ನಿರ್ಮಾಣ ಆಗಿ ಭಯ ಸೃಷ್ಟಿಯಾಗಿದೆ. ಜನರು ಥಂಡಿ ಸಹಿತ ಮಳೆ ಎದುರು ನೋಡಲಿದ್ದಾರೆ. ಐಎಂಡಿ ಮುನ್ಸೂಚನೆ ಪ್ರಕಾರ, ಇವತ್ತಿನಿಂದ 2 ದಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮೀಣ, ತುಮಕೂರು, ಕೋಲಾರ ಮತ್ತು ರಾಮನಗರ ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಆಗಲಿದೆ.
ಕೊಡಗು, ರಾಮನಗರ, ಶಿವಮೊಗ್ಗ, ತುಮಕೂರು, ಚಾಮರಾಜನಗರ, ಚಿಕ್ಕಬಳ್ಳಾಪುರ ಜಿಲ್ಲೆ ಸೇರಿ ಕೋಲಾರ, ಮಂಡ್ಯ, ಮೈಸೂರು ಜಿಲ್ಲೆಗಳಲ್ಲಿ ತುಂತುರು ಮಳೆ ಮುನ್ಸೂಚನೆ ಸಿಕ್ಕಿದೆ. ಹಾಗೆಯೇ ಜನವರಿ 16 ರವರೆಗೂ ಮಳೆಯ ಅಬ್ಬರದ ಆತಂಕ ಆವರಿಸಿದೆ.

