ಬೆಂಗಳೂರು: ಈಗಾಗಲೇ ರಾಜ್ಯದೆಲ್ಲೆಡೆ ಮುಂಗಾರು ಮಳೆಯಾಗುತ್ತಿದ್ದು, ಇದರ ಬೆನ್ನಲ್ಲೇ ಮುಂದಿನ 3 ದಿನಗಳ ಕಾಲ ರಾಜ್ಯದಲ್ಲಿ ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ಮಾಹಿತಿ ನೀಡಿದೆ.

ಇಂದಿನಿಂದ ಜುಲೈ 7ರವರೆಗೆ ಕರಾವಳಿಯಲ್ಲಿ ವರುಣಾರ್ಭಟದ ಮುನ್ಸೂಚನೆ ಇದೆ. ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಕೊಡಗು, ಶಿವಮೊಗ್ಗ ಹಾಗೂ ಚಿಕ್ಕಮಗಳೂರು ಜಿಲ್ಲೆಗಳಿಗೆ ಜುಲೈ 7ರವರೆಗೆ ಭಾರೀ ಮಳೆಯ ನಿರೀಕ್ಷೆ ಇರುವ ಕಾರಣ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

ಇನ್ನು ಸಿಲಿಕಾನ್ ಸಿಟಿ ಬೆಂಗಳೂರಲ್ಲಿ ಇಂದಿನಿಂದ ಜುಲೈ 7ರವರೆಗೆ ಸಾಧಾರಣ ಮಳೆಯ ಮುನ್ಸೂಚನೆ ಇದೆ. ಅದರಂತೆ ಇಂದು ಕೂಡ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿರುವ ವರದಿ ಇದೆ.