Bengaluru 21°C
Ad

7 ಜಿಲ್ಲೆಗಳಲ್ಲಿ ಇಂದು ಭಾರಿ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಕರ್ನಾಟಕದ 7 ಜಿಲ್ಲೆಗಳಲ್ಲಿ ಇಂದು ಭಾರಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜೂನ್‌ 10ರಂದು ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ರೆಡ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ.

ಬೆಂಗಳೂರು: ಕರ್ನಾಟಕದ 7 ಜಿಲ್ಲೆಗಳಲ್ಲಿ ಇಂದು ಭಾರಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜೂನ್‌ 10ರಂದು ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ರೆಡ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ.

Ad

ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಗದಗ, ಕೊಪ್ಪಳ ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆ ಸುರಿಯಲಿದ್ದು ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

Ad

ರಾಜ್ಯದ ವಿವಿಧೆಡೆ ಗುಡುಗು ಸಹಿತ 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು  ನೀಡಿದೆ.

Ad

ಹಾವೇರಿ, ಶಿವಮೊಗ್ಗಕ್ಕೆ ಆರೆಂಜ್​ ಅಲರ್ಟ್​, ಕಜಲಬುರಗಿ, ರಾಯಚೂರು, ಯಾದಗಿರಿ, ದಾವಣಗೆರೆಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

Ad

ದಕ್ಷಿಣ ಒಳನಾಡಿನ ಬಹುತೇಕ ಕಡೆಗಳಲ್ಲಿ ವ್ಯಾಪಕವಾಗಿ ಹಗುರವಾದ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಬೆಳಗಾವಿ, ಬೀದರ್, ಬಾಗಲಕೋಟೆ, ವಿಜಯಪುರ, ಕಲಬುರಗಿ ಜಿಲ್ಲೆಗಳಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಕೆಲವೊಮ್ಮೆ ಗುಡುಗು, ಮಿಂಚು ಇರಲಿದೆ.

Ad

ಗುಡುಗು ಸಹಿತ ಭಾರೀ ಮಳೆಯೊಂದಿಗೆ ಗಾಳಿ ವೇಗವು ಗಂಟೆಗೆ 55-65 ಕಿ.ಮೀ ಇರಲಿದೆ. ಹೀಗಾಗಿ ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಧಾರವಾಡ ಮತ್ತು ಗದಗ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ.

Ad

ಕರ್ನಾಟಕ ಕರಾವಳಿಯಲ್ಲಿ ಗಂಟೆಗೆ 45 ರಿಂದ 55 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ. ಹೀಗಾಗಿ ಜೂನ್ 10 ರಿಂದ 12 ರವರೆಗೆ ಮೀನುಗಾರರು ಸಮುದ್ರ ಪ್ರದೇಶಗಳಿಗೆ ಹೋಗದಂತೆ ಸೂಚಿಸಲಾಗಿದೆ.

Ad
Ad
Ad
Nk Channel Final 21 09 2023