Bengaluru 22°C
Ad

ಇಂದಿನಿಂದ ಬೆಂಗಳೂರು ಸೇರಿದಂತೆ ಹಲವೆಡೆ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ 

ಇಂದಿನಿಂದ ಬೆಂಗಳೂರು, ಕೊಡಗು, ಹಾಸನ ಸೇರಿದಂತೆ ಹಲವೆಡೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರು: ಇಂದಿನಿಂದ ಬೆಂಗಳೂರು, ಕೊಡಗು, ಹಾಸನ ಸೇರಿದಂತೆ ಹಲವೆಡೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಜೂನ್​ 3ರಂದು ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಗದಗ, ಧಾರವಾಡ, ಹಾವೇರಿ, ಕೊಪ್ಪಳ, ರಾಯಚೂರು, ಚಿತ್ರದುರ್ಗ, ಚಿಕ್ಕಮಗಳೂರು, ಹಾಸನ, ಕೋಲಾರ, ಮಂಡ್ಯ, ಮೈಸೂರು, ಶಿವಮೊಗ್ಗ, ತುಮಕೂರಿನಲ್ಲಿ ಹೆಚ್ಚು ಮಳೆಯಾಗಲಿದೆ.

ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಹಾಸನ, ಕೊಡಗು, ಮಂಡ್ಯ, ರಾಮನಗರ, ತುಮಕೂರಿನಲ್ಲಿ ಯೆಲ್ಲೋ ಹಾಗೂ ಆರೆಂಜ್​ ಅಲರ್ಟ್​ ಘೋಷಿಸಲಾಗಿದೆ.

ಬೆಂಗಳೂರು, ಹಾಸನ, ಶಿರಹಟ್ಟಿಯಲ್ಲಿ ಹೆಚ್ಚು ಮಳೆಯಾಗಿದೆ. ಬೆಂಗಳೂರಿನಲ್ಲಿ ಬೆಳಗ್ಗೆ ಶುಭ್ರ ಆಕಾಶವಿರಲಿದ್ದು ಸಂಜೆ ವೇಳೆಗೆ ಹೆಚ್ಚು ಮಳೆಯಾಗುವ ನಿರೀಕ್ಷೆ ಇದೆ.

ಕಲಬುರಗಿಯಲ್ಲಿ 42.3 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ಗದಗದಲ್ಲಿ 37.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 42.3ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 29.3ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 34.4ಡಿಗ್ರಿ ಸಲ್ಸಿಯಸ್​ ಗರಿಷ್ಠ ಉಷ್ಣಾಂಶ,23.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

Ad
Ad
Nk Channel Final 21 09 2023
Ad