ಬೆಂಗಳೂರು: ರಾಜ್ಯದೆಲ್ಲೆಡೆ ಭಾರೀ ಮಳೆಯಾಗಿದ್ದು, ಸಂಜೆಯಾಗುತ್ತಿದ್ದಂತೆ ಸಿಲಿಕಾನ್ ಸಿಟಿಗೆ ವರುಣನ ಅಬ್ಬರ ಜೋರಾಗಿದ್ದು, ಇಂದು ರಾಜಧಾನಿಗೆ ಮಳೆರಾಯ ಆಗಮಿಸಿದ್ದು, ದಿಢೀರ್ ಮಳೆಯಿಂದ ವಾಹನ ಸವಾರರು ರಸ್ತೆ ಮಧ್ಯೆ ಪರದಾಡುವ ಸ್ಥಿತಿ ನಿರ್ಮಾಣಗೊಂಡಿದೆ.
ದಿಢೀರ್ ಭಾರೀ ಮಳೆಯಿಂದ ಜನರ ಜೀವನ ಅಸ್ತವ್ಯಸ್ತವಾಗಿದ್ದು. ಮಳೆಯಿಂದ ಕಂಗಾಲಾದ ಸಿಲಿಕಾನ್ ಸಿಟಿ ಸವಾರರಿಗೆ ಸಂಕಷ್ಟ ಎದುರಾಗಿದೆ. ಬನಶಂಕರಿ, ಬಸವನಗುಡಿ, ಜಯನಗರ, ಕೋರಮಂಗಲ, ಕೆಆರ್ ಮಾರುಕಟ್ಟೆ, ಜೆಸಿ ರಸ್ತೆ, ಮೆಜೆಸ್ಟಿಕ್, ಎಂ.ಜಿ ರೋಡ್ ಗಿರಿನಗರ, ವಿಜಯನಗರ, ಮಲ್ಲೇಶ್ವರಂ, ಸೌತ್ ಎಂಡ್ ಸರ್ಕಲ್, ಮೆಜೆಸ್ಟಿಕ್ ಸೇರಿದಂತೆ ಹಲವು ಕಡೆ ಧಾರಾಕಾರವಾಗಿ ಮಳೆಯಾಗಿದೆ.

