ಬೆಂಗಳೂರು: ರಾಜ್ಯದ ಕೆಲ ಜಿಲ್ಲೆಗಳಲ್ಲಿ  ಮುಂದಿನ 2 ಗಂಟೆಗಳಲ್ಲಿ  ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಮಿಂಚು ಬಿರುಗಾಳಿ ಸಹಿತ ಭಾರೀ ಮಳೆಯ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಳ್ಳಾರಿ ದಾವಣಗೆರೆ, ಚಿತ್ರದುರ್ಗ, ಹಾಸನ, ತುಮಕೂರು, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಗಾಳಿಯ ವೇಗವೂ ಗಂಟೆಗೆ 30 ರಿಂದ 40 ಕಿ.ಮೀ ಇರಲಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮಾಹಿತಿಯನ್ನು ನೀಡಿದೆ.