ಬೆಂಗಳೂರು: ಜುಲೈ 4ರಂದು (ಗುರುವಾರ) ಕರಾವಳಿ ಕರ್ನಾಟಕದ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಬಿರುಸಿನ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಗಾಳಿಯ ವೇಗವು ತಲುಪುವ ಸಾಧ್ಯತೆಯಿದೆ ಹಾಗೂ ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಗಾಳಿ ಬೀಸುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೋಲಾರ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಕೆಲವೆಡೆ ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.
ಜುಲೈ 6ರವರೆಗೆ ಕರಾವಳಿ ಕರ್ನಾಟಕದ ಜಿಲ್ಲೆಗಳು, ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರಿ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

