ಬೆಂಗಳೂರು: ರಾಜ್ಯಾದ್ಯಂತ ಮಳೆ ಅಬ್ಬರ ತುಂಬಾನೇ ಜೋರಾಗಿದ್ದು, ಕೆಲವಡೆ ಭಾರಿ ಮಳೆಯಾಗುವ ಮುನ್ನೆಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ. 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದ್ದು, ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಗಾಳಿಯು 30-40 ಕಿ.ಮೀ ವೇಗದಲ್ಲಿ ಬೀಸಲಿದ್ದು,ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಬೆಳಗಾವಿ ಮತ್ತು ಕೊಡಗು ಜಿಲ್ಲೆಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.
Ad