ಬೆಂಗಳೂರು: ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ ಸೇರಿದಂತೆ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ನಾಳೆ ಗುರುವಾರ ಮಳೆ ಮುಂದುವರಿಯಲಿದ್ದು, ರಾಜ್ಯದ 10 ಜಿಲ್ಲೆಗಳಿಗೆ ಹವಾಮಾನ ಇಲಾಖೆಯು ಹಳದಿ ಅಲರ್ಟ್ ಘೋಷಿಸಿದೆ.
ದಕ್ಷಿಣ ಕನ್ನಡ, ಉತ್ತರ ಕನ್ನಡ, ಬೆಳಗಾವಿ, ಬೀದರ್, ಕಲಬುರಗಿ, ಯಾದಗಿರಿ, ಚಿಕ್ಕಮಗಳೂರು, ಹಾಸನ, ಕೊಡಗು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಗುರುವಾರ ಭಾರಿ ಮಳೆಯಾಗಲಿದೆ. ಈ ಜಿಲ್ಲೆಗಳಿಗೆ ಮುನ್ನೆಚ್ಚರಿಕಾ ಕ್ರಮವಾಗಿ ಹವಾಮಾನ ಇಲಾಖೆಯು ಹಳದಿ ಅಲರ್ಟ್ ಘೋಷಿಸಿದೆ.
ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಪ್ರತ್ಯೇಕವಾಗಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಬೆಳಗಾವಿ, ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಭಾರಿ ಮಳೆ ಜತೆಗೆ ಗಾಳಿಯ ವೇಗ ಪ್ರತಿ ಗಂಟೆಗೆ 30 ರಿಂದ 40 ಕಿ.ಮೀವರೆಗೆ ಇರಲಿದೆ. ಒಳನಾಡಿನ ಉಳಿದ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
Ad