ಬೆಂಗಳೂರು: ಇಂದು ಉತ್ತರ ಕನ್ನಡ ಸೇರಿ ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಒಳನಾಡಿನ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಆ.9ರಂದು ಕರಾವಳಿ ಜಿಲ್ಲೆಗಳಲ್ಲಿ ಒಂದೆರಡು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಒಳನಾಡಿನ ಜಿಲ್ಲೆಗಳಲ್ಲಿ ಅನೇಕ ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ಅದೇ ರೀತಿ 10ರಂದು ಉತ್ತರ ಒಳನಾಡು ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಕರಾವಳಿ ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಇದೇ ರೀತಿಯ ಹವಾಮಾನ ಆ.13ರವರೆಗೆ ಇರಲಿದೆ.
ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳ ಮುನ್ಸೂಚನೆ ಮುಂದಿನ 48 ಗಂಟೆಗಳು: ಸಾಮಾನ್ಯವಾಗಿ ಮೋಡ ಕವಿದ ಆಕಾಶ. ಹಗುರ ಮಳೆಯಾಗುವ ಸಾಧ್ಯತೆ ಹೆಚ್ಚು.
Ad