ಬೆಂಗಳೂರು: ಕರಾವಳಿ ಜಿಲ್ಲೆಗಳಲ್ಲಿ ಪ್ರತ್ಯೇಕವಾಗಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ರಾಜ್ಯದ ಉಳಿದ ಭಾಗಗಳಲ್ಲಿ ವ್ಯಾಪಕ ಸ್ಥಳಗಳಲ್ಲಿ ಚದುರಿದಂತೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.
ದಕ್ಷಿಣ ಒಳನಾಡಿನಲ್ಲಿ ಚದುರಿದಂತೆ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ತುಮಕೂರು ಮತ್ತು ರಾಮನಗರ ಜಿಲ್ಲೆಯಲ್ಲಿ ಪ್ರತ್ಯೇಕವಾಗಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಉಳಿದಂತೆ ಚಿಕ್ಕಬಳ್ಳಾಪುರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಮತ್ತು ಮಂಡ್ಯ ಜಿಲ್ಲೆಗಳಲ್ಲಿ ಮಧ್ಯಮ ಮಳೆಯಾಗಲಿದೆ.
ಉತ್ತರ ಒಳನಾಡಿನ ಹಗುರದಿಂದ ಕೂಡಿದ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಬೆಳಗಾವಿ, ಬಾಗಲಕೋಟೆ, ಬೀದರ್, ಕಲಬುರಗಿ, ಯಾದಗಿರಿ, ಧಾರವಾಡ, ಹಾವೇರಿ, ವಿಜಯಪುರ, ಗದಗ, ಕೊಪ್ಪಳ, ರಾಯಚೂರಿನಲ್ಲಿ ಚದುರಿದಂತೆ ಮಧ್ಯಮ ಮಳೆಯಾಗಲಿದೆ.
ಮಲೆನಾಡು ಭಾಗದಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು, ಹಾಸನದಲ್ಲಿ ಸಾಧಾರಣ ಮಳೆಯಾಗಲಿದೆ. ಕರಾವಳಿಯ ಉಡುಪಿ, ಉತ್ತರ ಕನ್ನಡದಲ್ಲಿ ವ್ಯಾಪಕವಾಗಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರತ್ಯೇಕವಾಗಿ ಭಾರಿ ಮಳೆಯಾಗುವ ಸಾಧ್ಯತೆಯಿದೆ.
ರಾಜಧಾನಿ ಬೆಂಗಳೂರಿನಲ್ಲೂ ಸಾಧಾರಣ ಮಳೆಯಾಗಲಿದ್ದು, ಗರಿಷ್ಠ ಮತ್ತು ಕನಿಷ್ಠ ತಾಪಮಾನಗಳು ಕ್ರಮವಾಗಿ 28 ಡಿಗ್ರಿ ಸೆಲ್ಸಿಯಸ್ ಮತ್ತು 21 ಡಿಗ್ರಿ ಸೆಲ್ಸಿಯಸ್ ಇರಲಿದೆ.