ಬೆಂಗಳೂರು : ಬೆಂಗಳೂರು ಸೇರಿ ರಾಜ್ಯದ 8ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮುಂದಿನ 2 ದಿನಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರು, ಬೆಂಗಳೂರು ಗ್ರಾಂ, ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಹಾಸನ, ಶಿವಮೊಗ್ಗ, ಚಿಕ್ಕಬಳ್ಳಾಪುರ ದಲ್ಲಿ ಉತ್ತಮ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಕಳೆದ 3-4 ದಿನಗಳಿಂದ ಒಣಹವೆ ಹಾಗೂ ಬಿಸಿಲು ಹೆಚ್ಚಿದ್ದು, ತಾಪಮಾನ ಏರಿಕೆಯಿಂದ ಜನರು ಕಂಗಾಲಾಗಿದ್ದು, ಇದೀಗ ಮಳೆ ಬೀಳುವ ವಿಚಾರ ಕೊಂಚ ಸಮಾಧಾನ ತಂದಿದೆ.ಮೇ 12 ತನಕ ಭಾರಿ ಮಳೆಯಾಗಲಿದೆ ಎನ್ನಲಾಗಿದೆ.

