ಬೆಂಗಳೂರು : ರಾಜ್ಯದಲ್ಲಿ ಮತ್ತೆ ಮಳೆಯಾಗುವ ಸಾಧ್ಯತೆ ಹೆಚ್ಚಾಗಿದೆ. ವಿವಿಧ ಕಡೆಗಳಲ್ಲಿ 2 ದಿನ ಬಾರಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಸೆಪ್ಟೆಂಬರ್ 17ವರೆಗೂ ರಾಜ್ಯದ ವಿವಿಧ ಭಾಗಗಳಲ್ಲಿ ಮಳೆ ಆರ್ಭಟ ಜೋರಾಗಿರಲಿದ್ದು, ಉತ್ತರ ಹಾಗೂ ದಕ್ಷಿಣ ಕರ್ನಾಟಕ ಭಾಗದ ಹಲವು ಜಿಲ್ಲೆಗಳಲ್ಲಿ ಮುಂದಿನ ನಾಲ್ಕೈದು ದಿನ ಮಳೆ ಮತ್ತಷ್ಟು ಬಿರುಸುಗೊಳ್ಳುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ
ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ರಾಮನಗರ, ಶಿವಮೊಗ್ಗ, ತುಮಕೂರು, ಬಳ್ಳಾರಿ, ಮಂಡ್ಯ, ಮೈಸೂರು ಮತ್ತು ವಿಜಯನಗರ ಜಿಲ್ಲೆಗಳು. ಬೆಂಗಳೂರು ಗ್ರಾಮೀಣ, ಬೆಂಗಳೂರು, ಚಾಮರಾಜನಗರ ಸೇರಿದಂತೆ ಕೆಲವೆಡೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

