ಬೆಂಗಳೂರು: ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯ ಬಹುತೇಕ ಕಡೆಗಳಲ್ಲಿ ಇಂದು  ಭಾರೀ ಮಳೆ ಸುರಿಯುವ ಸಾಧ್ಯತೆಯಿದೆ. ಕರಾವಳಿ ಕರ್ನಾಟಕದ ಉಳಿದ ಜಿಲ್ಲೆಗಳು ಮತ್ತು ಒಳನಾಡಿನ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಆ. 23ರಂದು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಹುತೇಕ ಕಡೆಗಳಲ್ಲಿ ಭಾರಿ ಮಳೆ ಸಾಧ್ಯತೆಯಿದೆ. ಒಳನಾಡಿನ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಆ.24ರಂದು ಕೂಡ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಹುತೇಕ ಕಡೆಗಳಲ್ಲಿ ಭಾರಿ ಮಳೆ ಸಾಧ್ಯತೆಯಿದೆ.

ಒಳನಾಡಿನ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಇದೇ ರೀತಿಯ ಹವಾಮಾನ ಆ.27ರವರೆಗೆ ಇರಲಿದೆ ಎಂದು ಮಾಹಿತಿ ನೀಡಿದೆ. ಗಾಳಿಯ ವೇಗ ಗಂಟೆಗೆ 35 ಕಿ.ಮೀ ನಿಂದ 45 ಕಿ.ಮೀ ವೇಗದಲ್ಲಿ 55 ಕಿ.ಮೀ ವರೆಗೆ ಬೀಸುವ ಗಾಳಿಯು ಕರ್ನಾಟಕ ಕರಾವಳಿಯ ಉದ್ದಕ್ಕೂ ಮತ್ತು ಹೊರಗೆ ಚಾಲ್ತಿಯಲ್ಲಿರುವ ಸಾಧ್ಯತೆಯಿದೆ.