ಬೆಂಗಳೂರು: ಮುಂದಿನ 4 ದಿನಗಳ ಕಾಲ ರಾಜ್ಯದ ಹಲವೆಡೆ ಭಾರೀ ಮಳೆಯಾಗಲಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. 8 ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌ ಹಾಗೂ 19 ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್‌ ಘೋಷಣೆ ಮಾಡಲಾಗಿದೆ.

ಬೆಂಗಳೂರಿನಲ್ಲೂ ಇಂದು ಜೋರು ಮಳೆಯಾಗುವ ಮುನ್ಸೂಚನೆ ನೀಡಿದ್ದು, ನಗರಕ್ಕೆ ಆರೆಂಜ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ ತುಮಕೂರು, ರಾಯಚೂರು, ಯಾದಗಿರಿ, ಕಲಬುರಗಿ, ಬೀದರ್ ಸೇರಿದಂತೆ 8 ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ. 19 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ.