ಬೆಂಗಳೂರು: ರಾಜ್ಯದಲ್ಲಿ ಮುಂದಿನ 24 ಗಂಟೆಯಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ. ಕರ್ನಾಟಕ ಕರಾವಳಿಯಲ್ಲಿ ಸಾಧಾರಣದಿಂದ ಭಾರೀ ಮಳೆಯಾದರೆ, ಮಲೆನಾಡಿನಲ್ಲಿ ಚದುರಿದಂತೆ ಹಗುರದಿಂದ ಸಾಧಾರಣದೊಂದಿಗೆ ಭಾರಿ ಮಳೆಯಾಗುವ ನಿರೀಕ್ಷೆಯಿದೆ.

ಮಲೆನಾಡು ಭಾಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗದಲ್ಲಿ ಮಳೆಯು ಅಬ್ಬರಿಸಲಿದೆ. ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ಪ್ರತ್ಯೇಕ ಸ್ಥಳಗಳಲ್ಲಿ ಮಧ್ಯಮದಿಂದ ಭಾರಿ ಮಳೆಯಾಗುವ ಸಾಧ್ಯತೆಯಿದೆ.

ದಕ್ಷಿಣ ಒಳನಾಡಿನ ದಾವಣಗೆರೆ ಜಿಲ್ಲೆಯಾದ್ಯಂತ ಚದುರಿದಂತೆ ಸಾಧಾರಣ ಮಳೆಯಾಗಲಿದೆ. ಉಳಿದಂತೆ ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಕೋಲಾರ, ಬಳ್ಳಾರಿ, ಮೈಸೂರು, ಮಂಡ್ಯ, ರಾಮನಗರ, ಚಾಮರಾಜನಗರ, ತುಮಕೂರು ಸೇರಿದಂತೆ ವಿಜಯನಗರದಲ್ಲಿ ಮಧ್ಯಮ ಮಳೆಯಾಗಲಿದೆ.