News Karnataka Kannada
Monday, May 06 2024
ಬೆಂಗಳೂರು

ರಾಜ್ಯದಲ್ಲಿ ಈ ಜಿಲ್ಲೆಗಳಿಗೆ ಭಾರಿ ಮಳೆ ಎಚ್ಚರಿಕೆ

Heavy rain warning for many districts of the state
Photo Credit : News Kannada

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ನಗರದಲ್ಲಿ ಧಾರಾಕಾರ ಮಳೆಯಾಗಲಿದೆ. ದಕ್ಷಿಣ ಕನ್ನಡ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ಕೋಲಾರ ಸೇರಿದಂತೆ ಹಲವೆಡೆ ಮಳೆಯಾಗುವ ಸಂಭವವಿದೆ. ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳದಲ್ಲಿ ವರುಣ ಧರೆಗೆ ಇಳಿಯಲಿದ್ದಾನೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ದಾವಣಗೆರೆ, ಚಿತ್ರದುರ್ಗ, ಮಂಡ್ಯ, ಮೈಸೂರು, ತುಮಕೂರು, ಶಿವಮೊಗ್ಗ, ವಿಜಯನಗರ ಜಿಲ್ಲೆಯಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಇಂದು ಗುಡುಗು, ಮಿಂಚು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ವಿಜಯಪುರ ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗಲಿದೆ. ದಕ್ಷಿಣ ಒಳನಾಡು ಜಿಲ್ಲೆಗಳಾದ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗಲಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು