ಬೆಂಗಳೂರು: ರಾಜ್ಯದಲ್ಲಿ ನ. 7ರ ವರೆಗೂ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಿರುವ ಹವಾಮಾನ ಇಲಾಖೆ, ಕೊಡಗು ಸೇರಿ ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ. ಕರ್ನಾಟಕದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ 10 ಜಿಲ್ಲೆಗಳಲ್ಲಿ ಅಧಿಕ ಮಳೆಯಾಗುವ ಸಾಧ್ಯತೆ ಇದ್ದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ನೀಡಲಾಗಿದೆ.
ದಕ್ಷಿಣ ಒಳನಾಡು, ಮಲೆನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದ್ದು ಉತ್ತರ ಒಳನಾಡಿನ ಪ್ರತ್ಯೇಕ ಕಡೆಗಳಲ್ಲಿ ವ್ಯಾಪಕವಾಗಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.