ಬೆಂಗಳೂರು:ಜುಲೈ 25ರಂದು ಗುರುವಾರ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ವಿಜಯಪುರ, ಕಲಬುರಗಿ, ಚಿಕ್ಕಮಗಳೂರು, ಶಿವಮೊಗ್ಗ ಸೇರಿ ರಾಜ್ಯ ವಿವಿಧೆಡೆ ಬಿರುಗಾಳಿ ಸಹಿತ ಭಾರಿ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇನ್ನು ಉತ್ತರ ಒಳನಾಡಿನ ಉಳಿದ ಜಿಲ್ಲೆಗಳ ಬಹುತೇಕ ಸ್ಥಳಗಳಲ್ಲಿ ಗಾಳಿಯ ವೇಗವು (40-50 kmph) ತಲುಪುವ ಸಾಧ್ಯತೆಯಿದೆ ಹಾಗೂ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಉಳಿದ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಗಾಳಿಯ ವೇಗವು (30-40 kmph) ತಲುಪುವ ಸಾಧ್ಯತೆಯಿದೆ ಹಾಗೂ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ಮಾಹಿತಿ ನೀಡಿದೆ.

