ಬೆಂಗಳೂರು: ರಾಜ್ಯದ ಕರಾವಳಿ ಸುತ್ತಮುತ್ತ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಮಲೆನಾಡಿನಲ್ಲಿ ಸಾಧಾರಣ ಮಳೆಯಾದರೆ ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಚದುರಿದಂತೆ ಹಗುರದಿಂದ ಕೂಡಿದ ಮಳೆಯಾಗುವ ಸಾಧ್ಯತೆಯಿದೆ ಎಂದು ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ ಹಾಗೂ ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರದಲ್ಲಿ ಚದುರಿದಂತೆ ಹಗುರದಿಂದ ಕೂಡಿದ ಮಳೆಯಾಗಲಿದೆ.
ಬೆಳಗಾವಿಯಲ್ಲಿ ಪ್ರತ್ಯೇಕವಾಗಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉಳಿದ ಜಿಲ್ಲೆಗಳಾದ ಧಾರವಾಡ, ಬಾಗಲಕೋಟೆ, ಬೀದರ್, ಗದಗ ಹಾಗೂ ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಚದುರಿದ ಮಳೆಯಾಗುವ ಸಾಧ್ಯತೆಯಿದೆ. ಮಲೆನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗದಲ್ಲೂ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.
ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ವ್ಯಾಪಕ ಸಾಧಾರಣದೊಂದಿಗೆ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರಿನಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 28 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಸಿಯಸ್ ಇರಲಿದೆ. ಕೆಲವೊಮ್ಮೆ ಬಿಸಿಲಿನ ಜತೆಗೆ ಮೋಡ ಕವಿದ ವಾತಾವರಣ ಇರಲಿದೆ. ವಿಪರೀತ ಮಳೆಯಾಗುವ ಸಾಧ್ಯತೆ ಇದ್ದು, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಚಿಕ್ಕಮಗಳೂರು, ಕೊಡಗು, ಕೋಲಾರ, ಶಿವಮೊಗ್ಗ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

