Ad

ಕರಾವಳಿ, ಮಲೆನಾಡು ಭಾಗದಲ್ಲಿ ಗುಡುಗು ಸಹಿತ ಭಾರೀ ಮಳೆ ಸಾಧ್ಯತೆ!

ಕರಾವಳಿ ಭಾಗದಲ್ಲಿ ಗುಡುಗು ಸಹಿತ ಭಾರೀ ಮಳೆಯಾಗಲಿದ್ದು, ಮಲೆನಾಡಿನಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಚದುರಿದಂತೆ ಹಗುರದಿಂದ ಲಘು ಮಳೆಯಾಗುವ ಸಾಧ್ಯತೆಯಿದೆ.

ಬೆಂಗಳೂರು: ಕರಾವಳಿ ಭಾಗದಲ್ಲಿ ಗುಡುಗು ಸಹಿತ ಭಾರೀ ಮಳೆಯಾಗಲಿದ್ದು, ಮಲೆನಾಡಿನಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಚದುರಿದಂತೆ ಹಗುರದಿಂದ ಲಘು ಮಳೆಯಾಗುವ ಸಾಧ್ಯತೆಯಿದೆ.

ಪ್ರತ್ಯೇಕ ಸ್ಥಳಗಳಲ್ಲಿ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಪ್ರತ್ಯೇಕವಾಗಿ ಚದುರಿದಂತೆ ಹಗುರದಿಂದ ಕೂಡಿದ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.

ಮಲೆನಾಡಿನ ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕೊಡಗಿನಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಪ್ರತ್ಯೇಕವಾಗಿ ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿಯ ದಕ್ಷಿಣ ಕನ್ನಡದಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಉಡುಪಿ, ಉತ್ತರ ಕನ್ನಡದಲ್ಲಿ ಸಾಧಾರಣ ಮಳೆಯಾಗಲಿದೆ.

ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬಳ್ಳಾರಿ, ಚಿತ್ರದುರ್ಗ, ಬಳ್ಳಾರಿ, ಮೈಸೂರು, ಮಂಡ್ಯ, ರಾಮನಗರ, ಚಾಮರಾಜನಗರ, ತುಮಕೂರು ಹಾಗೂ ದಾವಣಗೆರೆ, ಕೋಲಾರ, ವಿಜಯನಗರದಲ್ಲಿ ಪ್ರತ್ಯೇಕವಾಗಿ ಹಗುರದಿಂದ ಕೂಡಿದ ಮಳೆಯಾಗುವ ಸಾಧ್ಯತೆಯಿದೆ.

ಉತ್ತರ ಒಳನಾಡಿನ ಚದುರಿದಂತೆ ಹಗುರವಾದ ಮಳೆಯಾಗುವ ಸಾಧ್ಯತೆಯಿದೆ. ಬೀದರ್, ಕಲಬುರಗಿ, ಯಾದಗಿರಿ, ಬೆಳಗಾವಿ ಮತ್ತು ಧಾರವಾಡ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಹಾವೇರಿ, ವಿಜಯಪುರ, ಗದಗ, ಕೊಪ್ಪಳ, ರಾಯಚೂರು, ಬಾಗಲಕೋಟೆಯಲ್ಲಿ ಮಳೆಯಾಗಲಿದೆ. ಬೆಂಗಳೂರಿನಲ್ಲಿ ವ್ಯಾಪಕವಾಗಿ ಹಗುರದಿಂದ ಮಳೆಯಾಗುವ ಸಾಧ್ಯತೆಯಿದೆ.

 

Ad
Ad
Nk Channel Final 21 09 2023