News Karnataka Kannada
Saturday, May 04 2024
ಮಂಗಳೂರು

ಭಾರಿ ಮಳೆ ಸಾಧ್ಯತೆ: 3 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಣೆ

Rain Alert Bng Mng
Photo Credit : News Kannada

ಮಂಗಳೂರು/ ಬೆಂಗಳೂರು: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ, ಹಾವೇರಿಯಲ್ಲಿ, ದಕ್ಷಿಣ ಒಳನಾಡಿನ, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ವಿಜಯನಗರ, ತುಮಕೂರಿನಲ್ಲಿ ನವೆಂಬರ್ 7ರವರೆಗೆ ಮಳೆಯಾಗಲಿದೆ.

ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಕರಾವಳಿಯ ಹಲವು ಕಡೆಗಳಲ್ಲಿ ದಕ್ಷಿಣ ಒಳನಾಡಿನ ಬಹುತೇಕ ಕಡೆಗಳಲ್ಲಿ ಮಳೆಯಾಗಲಿದೆ, ಉತ್ತರ ಒಳನಾಡಿನಕೆಲವು ಕಡೆಗಳಲ್ಲಿ ಹಾಗೂ ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಗರಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 2-3 ಡಿಗ್ರಿ ಸೆಲ್ಸಿಯಸ್​ನಷ್ಟು ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು