Bengaluru 25°C
Ad

ರಾಜ್ಯದ ಈ ಜಿಲ್ಲೆಗಳಲ್ಲಿ ಭಾರಿ ಮಳೆ: ಆರೆಂಜ್ ಅರ್ಲಟ್,ಯಲ್ಲೋ ಅರ್ಲಟ್ ಘೋಷಣೆ

ಇಂದಿನಿಂದ ಬೆಂಗಳೂರು, ಕೊಡಗು, ಹಾಸನ ಸೇರಿದಂತೆ ಹಲವೆಡೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರು: ರಾಜ್ಯದ ಹಲವಡೆ ಭಾರಿ ಮಳೆ ಸುರಿಯುತ್ತಿದ್ದು ಇದು ಇನ್ನು ಎರಡು ದಿನಗಳ ಕಾಲ ಮುಂದುವರೆಯುದಾಗಿ ಹವಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಬಾಗಲಕೋಟೆ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರಿನ ಮೂಡಿಗೆರೆ ಚಿತ್ರದುರ್ಗದ ಹಿರಿಯೂರು, ಮಂಡ್ಯದ ಕೆ.ಆರ್ ಪೇಟೆ, ರಾಮನಗರ, ಮೈಸೂರು ಸೇರಿ ರಾಜ್ಯದ ವಿವಿಧ ಭಾಗಗಳಲ್ಲಿ ವರ್ಷಧಾರೆಯಾಗಿದೆ.

ಇಂದು ಚಿಕ್ಕಮಗಳೂರು, ಶಿವಮೊಗ್ಗದಲ್ಲಿ ಭಾರಿ ಮಳೆ ಬೀಳುವ ಸಾಧ್ಯತೆ ಇರುವುದರಿಂದ ಹವಾಮಾನ ಇಲಾಖೆ ಆರೆಂಜ್ ಅರ್ಲಟ್ ಘೋಷಿಸಿದೆ. ಉತ್ತರ ಕನ್ನಡ, ಧಾರವಾಡ, ಗದಗ, ಹಾವೇರಿ, ದಾವಣಗೆರೆ ಮತ್ತು ವಿಜಯನಗರದಲ್ಲಿ ಮುಂದಿನ 24 ಗಂಟೆ ಯಲ್ಲೋ ಅರ್ಲಟ್ ಘೋಷಿಸಿದೆ.

Ad
Ad
Nk Channel Final 21 09 2023
Ad