ಬೆಂಗಳೂರು: ಮೇ ತಿಂಗಳಲ್ಲಿ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಭರ್ಜರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಗುಡ್ನ್ಯೂಸ್ವೊಂದನ್ನು ನೀಡಿದೆ.
ಮೇ ತಿಂಗಳ ಮೊದಲ ವಾರದಲ್ಲಿ ಕೊಡಗು, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಹಾವೇರಿ, ಶಿವಮೊಗ್ಗ ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ ಮಳೆ ಬರಲಿದೆ ಎನ್ನಲಾಗಿದೆ.
ಇದರ ಜೊತೆಗೆ ಉತ್ತರ ಕರ್ನಾಟಕ ಭಾಗದ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ.
ಜೊತೆಗೆ ಬೆಂಗಳೂರು, ಮೈಸೂರು, ಹಾಸನ ಸೇರಿ ರಾಮನಗರ, ಮಂಡ್ಯ, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರದಲ್ಲಿ ಕೂಡ ಭರ್ಜರಿ ಮಳೆ ಬೀಳಲಿದೆ ಎಂದು ಹವಾಮಾನ ತಜ್ಞರ ಮಾಹಿತಿ ನೀಡಿದ್ದಾರೆ.
ಬೆಂಗಳೂರಿನಲ್ಲಿ ಇದೇ ವಾರದಲ್ಲಿ ಭರ್ಜರಿ ಮಳೆ ಬೀಳುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ವರದಿ ಮಾಡಿದೆ.
ರಾಜ್ಯದಾದ್ಯಂತ ಮುಂದಿನ 2 ವಾರಗಳ ಸಂಚಿತ ಮಳೆಯ ಮುನ್ಸೂಚನೆ ನಕ್ಷೆಗಳು:
Cumulative Rainfall Forecast Maps for the next 2 weeks over the State. pic.twitter.com/E8WJbxrHtz— Karnataka State Natural Disaster Monitoring Centre (@KarnatakaSNDMC) May 2, 2024