ಬೆಂಗಳೂರು : ರಾಜ್ಯದಲ್ಲಿ ಮುಂದಿನ 5-6 ದಿನಗಳ ವರೆಗೆ ಭಾರೀ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

7 ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಅಲರ್ಟ್ ಘೋಷಣೆ ಮಾಡಲಾಗಿದೆ. ಪ್ರಮುಖವಾಗಿ ಬೆಳಗಾವಿ, ಬೀದರ್ ಮತ್ತು ಕಲಬುರಗಿ ಜಿಲ್ಲೆಯ ಕೆಲವು ಭಾಗಗಳಲ್ಲಿ ಮಳೆಯಾಗಲಿದೆ. ಶಿವಮೊಗ್ಗ, ಚಿಕ್ಕಮಗಳೂರಿನ ಕೆಲವು ಭಾಗಗಳಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

ಬೆಂಗಳೂರಲ್ಲಿ ಮುಂದಿನ 2 ದಿನ ಮಳೆಯಾಗುವ ಸಾಧ್ಯತೆ ಇದೆ. ಬಳ್ಳಾರಿ, ಚಿಕ್ಕಮಗಳೂರು, ಶಿವಮೊಗ್ಗ, ವಿಜಯನಗರ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದ್ದು,

ಧಾರವಾಡ, ಹಾವೇರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ತುಮಕೂರಿನಲ್ಲೂ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ದಕ್ಷಿಣ ಕನ್ನಡ, ಮಂಗಳೂರು ಉಡುಪಿ ಭಾಗದಲ್ಲಿ ಅ.1ರಿಂದ 3ರವರೆಗೆ ಯೆಲ್ಲೋ ಅಲರ್ಟ್ ಇರಲಿದೆ.