Ad

ಜೈಲು ಪಾಲಾಗಿದ್ದ ತೆಲುಗು ನಟಿ ಹೇಮಾಗೆ ಸಿಕ್ತು ಜಾಮೀನು

ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ಬಳಿಯ ಜಿ.ಆರ್​. ಫಾರ್ಮ್​ಹೌಸ್​ನಲ್ಲಿ ರೇವ್ ಪಾರ್ಟಿ ಮಾಡಿದ ಪ್ರಕರಣದಲ್ಲಿ ಜೈಲು ಸೇರಿದ್ದ ನಟಿ ಹೇಮಾ ಈಗ ಜಾಮೀನು ಪಡೆದಿದ್ದಾರೆ.

ಬೆಂಗಳೂರು:   ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ಬಳಿಯ ಜಿ.ಆರ್​. ಫಾರ್ಮ್​ಹೌಸ್​ನಲ್ಲಿ ರೇವ್ ಪಾರ್ಟಿ ಮಾಡಿದ ಪ್ರಕರಣದಲ್ಲಿ ಜೈಲು ಸೇರಿದ್ದ ನಟಿ ಹೇಮಾ ಈಗ ಜಾಮೀನು ಪಡೆದಿದ್ದಾರೆ. ತೆಲುಗು ಚಿತ್ರರಂಗದಲ್ಲಿ ಖ್ಯಾತಿ ಹೊಂದಿರುವ ನಟಿ ಹೇಮಾ ಅವರು ಹೈದರಾಬಾದ್​​ನಿಂದ ಬೆಂಗಳೂರಿಗೆ ಬಂದು ರೇವ್​ ಪಾರ್ಟಿ ಮಾಡಿದ್ದರು ಎಂಬ ಆರೋಪ ಇದೆ. ಈ ಪ್ರಕರಣದಲ್ಲಿ ಅವರನ್ನು ಜೂನ್​ 14ರ ತನಕ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು. ಜಾಮೀನಿಗಾಗಿ ಅವರು ಅರ್ಜಿ ಸಲ್ಲಿಸಿದ್ದರು. ಇಂದು (ಜೂನ್​ 12) ಹೇಮಾಗೆ ಜಾಮೀನು ಮಂಜೂರು ಮಾಡಲಾಗಿದೆ.

Ad
300x250 2

ಬೆಂಗಳೂರು ಗ್ರಾಮಾಂತರ ಎನ್​ಡಿಪಿಎಸ್​ ವಿಶೇಷ ಕೋರ್ಟ್‌ನಿಂದ ನಟಿ ಹೇಮಾಗೆ ಜಾಮೀನು ನೀಡಲಾಗಿದೆ. ಹೇಮಾಳಿಂದ ಯಾವುದೇ ಮಾದಕವಸ್ತು ವಶಕ್ಕೆ ಪಡೆಯಲಾಗಿಲ್ಲ. ಹಲವು ದಿನಗಳ ನಂತರ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ ಎಂದು ಹೇಮಾ ಪರ ವಕೀಲ ಮಹೇಶ್ ಕಿರಣ್ ಶೆಟ್ಟಿ ವಾದ ಮಾಡಿದ್ದಾರೆ. ಷರತ್ತುಬದ್ಧ ಜಾಮೀನು ಮಂಜೂರು ಮಾಡಿ ಕೋರ್ಟ್‌ ಆದೇಶಿಸಿದೆ.

Ad
Ad
Nk Channel Final 21 09 2023
Ad