ಬೆಂಗಳೂರು: ಕೇರಳದಲ್ಲಿ ನಿಫಾ ವೈರಸ್ಗೆ ಇಬ್ಬರು ಬಲಿಯಾಗಿದ್ದಾರೆ. ಹೀಗಾಗಿ ಎಚ್ಚರ ವಹಿಸುವಂತೆ ಬೆಂಗಳೂರು ಮಹಾನಗರ ಪಾಲಿಕೆಯಿಂದ ಸೂಚನೆ ನೀಡಲಾಗಿದೆ. ನಗರದಲ್ಲಿ ಈಗಾಗಲೇ ಒಂದ್ಕಡೆ ಡೆಂಘೀ ಪ್ರಕರಣಗಳು ಜಾಸ್ತಿಯಾಗ್ತಿದ್ದು, ವಾರ್ಡ್ ಕ್ಲೀನಿಂಗ್ಗೆ ಒತ್ತು ಕೊಡಲಾಗಿದೆ.
ಏರ್ಪೋರ್ಟ್ನಲ್ಲೂ ಕೂಡ ಅಧಿಕಾರಿಗಳು ನಿಗಾ ಇಟ್ಟಿದ್ದಾರೆ. ಬಾವಲಿಗಳಿಂದ ಹುಟ್ಟಿಕೊಳ್ಳುವ ಈ ನಿಫಾ ವೈರಸ್ಗೆ ಕೇರಳದ ಕಲ್ಲಿಕೋಟೆ ಜಿಲ್ಲೆಯಲ್ಲಿ ಆಗಸ್ಟ್ 30 ಹಾಗೂ ಸೆಪ್ಟೆಂಬರ್ 11ರಂದು ಇಬ್ಬರು ಸಾವನ್ನಪ್ಪಿದ್ದಾರೆ. ಇದು 2ನೇ ಬಾರಿಗೆ ನಿಫಾ ವೈರಸ್ ಸೋಂಕು ಕೇರಳದಲ್ಲಿ ಪತ್ತೆಯಾಗಿದ್ದು, ಆತಂಕ ಮನೆ ಮಾಡಿದೆ.
ನಿಫಾ ವೈರಸ್ನಿಂದಾಗಿಯೇ ಇಬ್ಬರು ಸಾವನ್ನಪ್ಪಿರೋದು ಖಚಿತ ಎಂದು ವೈದ್ಯಾಧಿಕಾರಿಗಳು ದೃಢಪಡಿಸಿದ್ದಾರೆ. 2018ರಲ್ಲಿ ಮೊದಲ ಬಾರಿಗೆ ದಕ್ಷಿಣ ಭಾರತದ ಕೇರಳದಲ್ಲಿ ನಿಫಾ ವೈರಸ್ ಕಾಣಿಸಿಕೊಂಡಿತ್ತು. ಈ ನಡುವೆ ಕೇರಳ ಸರ್ಕಾರ ಕೋಝಿಕೋಡ್ನಲ್ಲಿ ಏಳು ಗ್ರಾಮ ಪಂಚಾಯಿತಿಗಳನ್ನು ಕಂಟೈನ್ ಮೆಂಟ್ ವಲಯಗಳಾಗಿ ಘೋಷಣೆ ಮಾಡಿದೆ. ಜೊತೆಗೆ ಸೋಂಕು ಹರಡುವುದನ್ನು ತಡೆಯಲು ಕ್ರಮ ಕೈಗೊಳ್ಳಲಾಗಿದೆ ಎಂದು ಸರ್ಕಾರ ಹೇಳಿದೆ.