Bengaluru 28°C
Ad

ಸಿದ್ದುಗೆ ನಿರಾಸೆ : ಅರ್ಜಿ ವಜಾಗೊಳಿಸಿದ ಹೈಕೋರ್ಟ್‌

ರಾಜ್ಯ ರಾಜಕಾರಣದಲ್ಲಿ ದೊಡ್ಡ ಸದ್ದು ಮಾಡಿರುವ ಹಾಗೂ ರಾಜ್ಯಪಾಲರು ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ನಡುವೆ ಕಾನೂನು ಸಮರಕ್ಕೆ ಸಾಕ್ಷಿಯಾಗಿರುವ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ನಿವೇಶನ ಹಂಚಿಕೆ ಹಗರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್‌ ಮಂಗಳವಾರ (ಸೆ.24) ಸಿಎಂ ಸಿದ್ದರಾಮಯ್ಯ ಅರ್ಜಿಯನ್ನು ವಜಾಗೊಳಿಸಿ  ಮಹತ್ವದ ತೀರ್ಪನ್ನು ಪ್ರಕಟಿಸಿದೆ.

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ದೊಡ್ಡ ಸದ್ದು ಮಾಡಿರುವ ಹಾಗೂ ರಾಜ್ಯಪಾಲರು ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ನಡುವೆ ಕಾನೂನು ಸಮರಕ್ಕೆ ಸಾಕ್ಷಿಯಾಗಿರುವ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ನಿವೇಶನ ಹಂಚಿಕೆ ಹಗರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್‌ ಮಂಗಳವಾರ (ಸೆ.24) ಸಿಎಂ ಸಿದ್ದರಾಮಯ್ಯ ಅರ್ಜಿಯನ್ನು ವಜಾಗೊಳಿಸಿ  ಮಹತ್ವದ ತೀರ್ಪನ್ನು ಪ್ರಕಟಿಸಿದೆ.

ರಾಜ್ಯಪಾಲರು ಪ್ರಾಸಿಕ್ಯೂಷನ್‌ ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿದ ಅರ್ಜಿಯನ್ನು ಹೈಕೋರ್ಟ್‌ ವಜಾಗೊಳಿಸಿ, ರಾಜ್ಯಪಾಲರ ಅನುಮತಿ ನೀಡಿರುವುದನ್ನು ಎತ್ತಿಹಿಡಿದಿದೆ. ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ತಮ್ಮ ವಿರುದ್ಧ ಅಭಿಯೋಜನೆಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿಯ ಕುರಿತು ನ್ಯಾ|ಎಂ.ನಾಗಪ್ರಸನ್ನ ಅವರಿರುವ ಏಕಸದಸ್ಯ ನ್ಯಾಯಪೀಠವು ಕಾಯ್ದಿರಿಸಿದ್ದ ತೀರ್ಪನ್ನು ಪ್ರಕಟಿಸಿದೆ.

 

 

Ad
Ad
Nk Channel Final 21 09 2023