ಬೆಂಗಳೂರು: ಪ್ರಜ್ವಲ್ ರೇವಣ್ಣ ಸಂಸದ ಸ್ಥಾನ ಆಯ್ಕೆ ಅಸಿಂಧು ಆದೇಶವನ್ನು ಅಮಾನತುಗೊಳಿಸಲು ಸಲ್ಲಿಸಿದ ಅರ್ಜಿಯನ್ನು ಹೈಕೋರ್ಟ್ ಶುಕ್ರವಾರ ವಜಾಗೊಳಿಸಿದೆ.
ಆ ಮೂಲಕ ಪ್ರಜ್ವಲ್ ರೇವಣ್ಣಗೆ ಮಧ್ಯಂತರ ರಿಲೀಫ್ ನೀಡಲು ಹೈಕೋರ್ಟ್ ನಕಾರವೆತ್ತಿದೆ. ಸಂಸದರಾಗಿ ಪ್ರಜ್ವಲ್ ರೇವಣ್ಣ ಆಯ್ಕೆ ಅಸಿಂಧು ಆದೇಶಕ್ಕೆ ‘ಸುಪ್ರೀಂ’ಗೆ ಮೇಲ್ಮನವಿ ಸಲ್ಲಿಕೆವರೆಗೆ ತಡೆ ನೀಡಲು ಮನವಿ ಮಾಡಿದ್ದರು. ಪ್ರಜ್ವಲ್ ರೇವಣ್ಣ ಅರ್ಜಿ ವಿಚಾರಣೆ ನಡೆಸಿದ ನ್ಯಾ. ಕೆ. ನಟರಾಜನ್ ಅವರು ತೀರ್ಪನ್ನು ಕಾಯ್ದಿರಿಸಿದ್ದರು.
ಇಂದು ತೀರ್ಪು ಪ್ರಕಟಿಸಿರುವ ಅವರು, ಸಂಸದ ಸ್ಥಾನದಿಂದ ಅನರ್ಹಗೊಳಿಸಿದ ಆದೇಶಕ್ಕೆ ತಡೆ ನೀಡಲು ನಿರಾಕರಿಸಿದ್ದಾರೆ. ಸಂಸದ ಸ್ಥಾನದಿಂದ ಪ್ರಜ್ವಲ್ ರೇವಣ್ಣ ಆಯ್ಕೆಯನ್ನು ಹೈಕೋರ್ಟ್ ಇತ್ತೀಚೆಗೆ ಅಸಿಂಧುಗೊಳಿಸಿತ್ತು. ಶಾಸಕ ಎ.ಮಂಜು ಹಾಗೂ ವಕೀಲ ದೇವರಾಜೇಗೌಡ ಸಲ್ಲಿಸಿದ್ದ ಚುನಾವಣಾ ತಕರಾರು ಅರ್ಜಿಗಳ ವಿಚಾರಣೆ ನಡೆಸಿದ ಹೈಕೋರ್ಟ್ ಸಂಸದ ಪ್ರಜ್ವಲ್ ರೇವಣ್ಣಗೆ ಶಾಕ್ ನೀಡಿತ್ತು