Bengaluru 22°C
Ad

ಸಂತ್ರಸ್ಥೆ ವಿಡಿಯೋ ಹಂಚಿಕೆ : ಪ್ರೀತಂ ಗೌಡ ಬಂಧಿಸದಂತೆ ಹೈಕೋರ್ಟ್ ಆದೇಶ

ಪ್ರಜ್ವಲ್‌ ರೇವಣ್ಣ ಪ್ರಕರಣದಲ್ಲಿ ಸಂತ್ರಸ್ಥೆಯ ಖಾಸಗಿ ವಿಡಿಯೋ ಹಂಚಿಕೆ ಮಾಡಿದ್ದಾರೆ ಎಂಬ ಆರೋಪ ಹಿನ್ನಲೆಯಲ್ಲಿ ಪ್ರೀತಂ ಗೌಡ ಬಂಧಿಸುವಂತೆ ಹೇಳಲಾಗಿತ್ತು ಆದರೆ ಬಂಧಿಸದಂತೆ ಹೈಕೋರ್ಟ್ ಶುಕ್ರವಾರ ಆದೇಶ ಹೊರಡಿಸಿದೆ.

ಬೆಂಗಳೂರು: ಪ್ರಜ್ವಲ್‌ ರೇವಣ್ಣ ಪ್ರಕರಣದಲ್ಲಿ ಸಂತ್ರಸ್ಥೆಯ ಖಾಸಗಿ ವಿಡಿಯೋ ಹಂಚಿಕೆ ಮಾಡಿದ್ದಾರೆ ಎಂಬ ಆರೋಪ ಹಿನ್ನಲೆಯಲ್ಲಿ ಪ್ರೀತಂ ಗೌಡ ಬಂಧಿಸುವಂತೆ ಹೇಳಲಾಗಿತ್ತು ಆದರೆ ಬಂಧಿಸದಂತೆ ಹೈಕೋರ್ಟ್ ಶುಕ್ರವಾರ ಆದೇಶ ಹೊರಡಿಸಿದೆ. ಆ ಮೂಲಕ ಅವರಿಗೆ ಬಂಧನದಿಂದ ಬಿಗ್​ ರಿಲೀಫ್ ಸಿಕ್ಕಿದೆ. ತನಿಖೆ ಮುಂದುವರಿಸಲು ಎಸ್ಐಟಿಗೆ ತಿಳಿಸಿದ್ದು, ವಿಚಾರಣೆಗೆ ಸಹಕರಿಸಲು ಅರ್ಜಿದಾರ ಪ್ರೀತಂ ಗೌಡಗೆ ಹೈಕೋರ್ಟ್ ಸೂಚನೆ ನೀಡಿದೆ.

ಪೆನ್‌ಡ್ರೈವ್‌ ಖರೀದಿ ಮಾಡಿಸಿದ್ದೇ ಪ್ರೀತಂಗೌಡ. ಪ್ರೀತಂಗೌಡ ಸಹಚರರು ಪೆನ್‌ಡ್ರೈವ್‌ ಹಂಚಿದ್ದಾರೆ ಅಂತಾ ಆರೋಪಿಸಿದ್ದರು. ಮಹಿಳೆ ನೀಡಿರುವ ದೂರು ಆಧರಿಸಿ ಎಫ್​ಐಆರ್​ ದಾಖಲಿಸಿದ್ದ ಬೆಂಗಳೂರಿನ ಸೈಬರ್‌ ಕ್ರೈಂ ಪೊಲೀಸರು, ಪ್ರೀತಂಗೌಡ ವಿರುದ್ಧ ಕಠಿಣ ಸೆಕ್ಷನ್‌ಗಳನ್ನೇ ಹಾಕಲಾಗಿತ್ತು.

Ad
Ad
Nk Channel Final 21 09 2023
Ad