ಬೆಂಗಳೂರು: ಪಿಎಸ್ಐ 545 ಹುದ್ದೆಗಳಿಗೆ ಮರುಪರೀಕ್ಷೆಗೆ ಹೈಕೋರ್ಟ್ ಆದೇಶ ನೀಡಿದೆ. ಸ್ವತಂತ್ರ ಸಂಸ್ಥೆಯಿಂದ ಪರೀಕ್ಷೆ ನಡೆಸಲು ಹೈಕೋರ್ಟ್ ಸೂಚನೆ ನೀಡಿದೆ. ಮರುಪರೀಕ್ಷೆ ಪ್ರಶ್ನಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.
ಈ ಮೂಲಕ ನ್ಯಾಯಾದೀಶ ಪಿ.ಎಸ್.ದಿನೇಶ್ ಕುಮಾರ್, ಟಿ.ಜಿ.ಶಿವಶಂಕರೇಗೌಡರಿದ್ದ ಪೀಠ ರಾಜ್ಯ ಸರ್ಕಾರದ ಕ್ರಮವನ್ನು ಎತ್ತಿಹಿಡಿದಿದೆ.
ಪಿಎಸ್ಐ ನೇಮಕಾತಿಯಲ್ಲಿ ಅಕ್ರಮದ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಈ ಮೊದಲು ನಡೆಸಿದ್ದ ಲಿಖಿತ ಪರೀಕ್ಷೆ ರದ್ದುಪಡಿಸಿ, ಮರುಪರೀಕ್ಷೆ ನಡೆಸಲು ಹಿಂದಿನ ರಾಜ್ಯ ಸರ್ಕಾರ ಹೊರಡಿಸಿರುವ ಆದೇಶ ರದ್ದುಪಡಿಸಬೇಕು. ಕಳಂಕಿತ ಮತ್ತು ಕಳಂಕರಹಿತ ಅಭ್ಯರ್ಥಿಗಳನ್ನು ಪ್ರತ್ಯೇಕಿಸಿ, ನೇಮಕಾತಿ ಆದೇಶ ನೀಡಲು ಸರ್ಕಾರಕ್ಕೆ ನಿರ್ದೇಶಿಸಬೇಕು ಎಂದು ಕೋರಿ ಆಯ್ಕೆಯಾಗಿದ್ದ ನೂರಾರು ಅಭ್ಯರ್ಥಿಗಳು ಸಲ್ಲಿಸಿರುವ ಅರ್ಜಿಗಳ ವಿಚಾರಣೆ ಪೂರ್ಣಗೊಳಿಸಿ ಅ.26 ರಂದು ಕಾಯ್ದಿರಿಸಿರುವ ಆದೇಶವನ್ನು ನ್ಯಾಯಮೂರ್ತಿಗಳಾದ ಪಿ ಎಸ್ ದಿನೇಶ್ ಕುಮಾರ್ ಮತ್ತು ಟಿ ಜಿ ಶಿವಶಂಕರೇಗೌಡ ಅವರ ನೇತೃತ್ವದ ವಿಭಾಗೀಯ ಪೀಠ ಇಂದು ಮಧ್ಯಾಹ್ನ ಆದೇಶ ಪ್ರಕಟಿಸಿದೆ.