ಹೆಚ್ಚಿನ ಪ್ರಮಾಣದ ಮತದಾನವು ನಮ್ಮ ಪ್ರಜಾಪ್ರಭುತ್ವವನ್ನು ಬಲಪಡಿಸುತ್ತದೆ: ಮೋದಿ

ಬೆಂಗಳೂರು: ಕರ್ನಾಟಕದ 14 ಕ್ಷೇತ್ರಗಳಲ್ಲಿಯೂ ಮತದಾನ ನಡೆಯುತ್ತಿರುವುದರಿಂದ ಸಾಮಾಜಿಕ ಮಾಧ್ಯಮ ಎಕ್​​ನಲ್ಲಿ ಪ್ರಧಾನಿ ನರೇಂದ್ರ ಮೋದಿ ಕನ್ನಡದಲ್ಲಿಯೇ ಸಂದೇಶ ಪ್ರಕಟಿಸಿದ್ದಾರೆ.

‘ಲೋಕಸಭೆ ಚುನಾವಣೆಯ ಎರಡನೇ ಹಂತದಲ್ಲಿ ಇಂದು ಮತದಾನ ನಡೆಯುತ್ತಿರುವ ಕ್ಷೇತ್ರಗಳಲ್ಲಿ ಪ್ರತಿಯೊಬ್ಬರೂ ದಾಖಲೆ ಸಂಖ್ಯೆಯಲ್ಲಿ ಭಾಗವಹಿಸುವಂತೆ ಮನವಿ ಮಾಡುತ್ತೇನೆ. ಹೆಚ್ಚಿನ ಪ್ರಮಾಣದ ಮತದಾನವು ನಮ್ಮ ಪ್ರಜಾಪ್ರಭುತ್ವವನ್ನು ಬಲಪಡಿಸುತ್ತದೆ. ನಮ್ಮ ಯುವ ಮತದಾರರು ಮತ್ತು ಮಹಿಳಾ ಮತದಾರರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ನಾನು ವಿಶೇಷವಾಗಿ ಕೋರುತ್ತೇನೆ. ನಿಮ್ಮ ಮತ ನಿಮ್ಮ ಧ್ವನಿ!’ ಎಂದು ಸಂದೇಶದಲ್ಲಿ ಮೋದಿ ಉಲ್ಲೇಖಿಸಿದ್ದಾರೆ.

ಕರ್ನಾಟಕದ ಲೋಕಸಭಾ ಕ್ಷೇತ್ರಗಳಾದ ಬೆಂಗಳೂರು ಕೇಂದ್ರ, ಬೆಂಗಳೂರು ಉತ್ತರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ದಕ್ಷಿಣ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಕ್ಷಿಣ ಕನ್ನಡ, ಹಾಸನ, ಕೋಲಾರ, ಮಂಡ್ಯ, ಮೈಸೂರು, ತುಮಕೂರು, ಉಡುಪಿ ಚಿಕ್ಕಮಗಳೂರುಗಳಲ್ಲಿ ಮತದಾನ ಆರಂಭವಾಗಿದೆ.

Ashika S

Recent Posts

ಅಂಜಲಿ ಅಂಬಿಗೇರ ಕೊಲೆ ಪ್ರಕರಣ: ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ ರಾಜೀವ್ ಅಮಾನತು

ಅಂಜಲಿ ಅಂಬಿಗೇರ ಕೊಲೆ  ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ.ರಾಜೀವ್ ಅಮಾನತು ಮಾಡಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವೈಫಲ್ಯ ಹಿನ್ನೆಲೆ  ಅಮಾನತು…

3 hours ago

ಹುಬ್ಬಳ್ಳಿ ಕೊಲೆ ಪ್ರಕರಣ : ಆರೋಪಿ ಎನ್‌ಕೌಂಟರ್‌ಗೆ ಆಗ್ರಹ

ಹುಬ್ಬಳ್ಳಿಯ ವೀರಾಪುರ ಓಣಿ ನಿವಾಸಿ ಅಂಜಲಿ ಅಂಬಿಗೇರ್‌ ಕೊಲೆ ಆರೋಪಿಗೆ ಎನ್‌ಕೌಂಟರ್‌ ಮಾಡಬೇಕೆಂದು ಟೋಕರೆ ಕೋಳಿ ಸಮಾಜ ಸಂಘ ಆಗ್ರಹಿಸಿದೆ.

4 hours ago

ಗತವೈಭವ ಸಾರುವ ಅಪರೂಪದ ಸಂಗೀತ ರುದ್ರೇಶ್ವರ ದೇವಸ್ಥಾನ

ಚಾಲುಕ್ಯರ ಕಾಲದಲ್ಲಿ ಸಂಗೀತ ವಿಶ್ವವಿದ್ಯಾಲಯದ ತಾಣವಾಗಿದ್ದ ಗೋರಟಾ(ಬಿ)ದಲ್ಲಿ ಗತವೈಭವ ಸಾರುವ ಸದುದ್ದೇಶದಿಂದ ಸಂಗೀತ ರುದ್ರೇಶ್ವರರ ವಿಶಿಷ್ಟ ಮತ್ತು ಅಪರೂಪದ ದೇವಸ್ಥಾನ…

4 hours ago

ನ್ಯೂಸ್ ಕರ್ನಾಟಕ ವರದಿಗೆ ಎಚ್ಚೆತ್ತ ತಾಲ್ಲೂಕು ಆಡಳಿತ : ಗ್ರಾಮಕ್ಕೆ ತಹಶೀಲ್ದಾರ್ ಭೇಟಿ

ಸಮಸ್ಯೆ ಬಗೆಹರಿಸಿ ಇಲ್ಲದಿದ್ದರೆ ಒಂದು ತೊಟ್ಟು ವಿಷ ಕೊಡಿ ಎಂದು ಗ್ರಾಮವನ್ನೇ ತೊರೆಯಲು ಮುಂದಾಗಿದ್ದ ಗ್ರಾಮಸ್ಥರಿಗೆ ನಂಜನಗೂಡು ತಹಶೀಲ್ದಾರ್ ಶಿವಕುಮಾರ್…

4 hours ago

ಭಗವಂತ ಖೂಬಾ ಹ್ಯಾಟ್ರಿಕ್‌ ಜಯ ನಿಶ್ಚಿತ : ಶೈಲೇಂದ್ರ

ಮೂರನೇ ಸಲ ಕೇಂದ್ರ ಸಚಿವ ಭಗವಂತ ಖೂಬಾ ಅವರು ಬೀದರ್‌ ಲೋಕಸಭಾ ಕ್ಷೇತ್ರದಿಂದ ಜಯ ಗಳಿಸುವುದು ನಿಶ್ಚಿತ' ಎಂದು ಬಿಜೆಪಿ…

4 hours ago

ಭಾರತೀಯರಿಗೆ ಗುಡ್‌ ನ್ಯೂಸ್‌ : ವೀಸಾ ಇಲ್ಲದೆ ರಷ್ಯಾಕ್ಕೆ ಹೋಗುವ ಅವಕಾಶ

ವಿದೇಶಕ್ಕೆ ಸುತ್ತಬೇಕು ಎನ್ನುವ ಪ್ರವಾಸಿಗರಿಗೆ ಒಂದು ಶುಭ ಸುದ್ದಿ. ಭಾರತೀಯರು ಇನ್ನು ಶೀಘ್ರದಲ್ಲೇ ವೀಸಾ ಇಲ್ಲದೆ ರಷ್ಯಾ ಪ್ರವಾಸ ಮಾಡಬಹುದು.…

4 hours ago