Ad

ಅತ್ಯಧಿಕ ಪವನ ವಿದ್ಯುತ್ ಸಾಮರ್ಥ್ಯ: ಕರ್ನಾಟಕಕ್ಕೆ 2ನೇ ಸ್ಥಾನ

2023-24ನೇ ಸಾಲಿನಲ್ಲಿ ನಿಯೋಜಿಸಲಾದ ಅತ್ಯಧಿಕ ಪವನ ವಿದ್ಯುತ್ ಸಾಮರ್ಥ್ಯಕ್ಕಾಗಿ ಕರ್ನಾಟಕ 2ನೇ ಸ್ಥಾನ ಪಡೆದುಕೊಂಡಿದೆ. ಗುಜರಾತ್ ಅಗ್ರಸ್ಥಾನ ಪಡೆದರೆ, ತಮಿಳುನಾಡು 3ನೇ ಸ್ಥಾನ ಪಡೆದುಕೊಂಡಿದೆ.

ಬೆಂಗಳೂರು: 2023-24ನೇ ಸಾಲಿನಲ್ಲಿ ನಿಯೋಜಿಸಲಾದ ಅತ್ಯಧಿಕ ಪವನ ವಿದ್ಯುತ್ ಸಾಮರ್ಥ್ಯಕ್ಕಾಗಿ ಕರ್ನಾಟಕ 2ನೇ ಸ್ಥಾನ ಪಡೆದುಕೊಂಡಿದೆ. ಗುಜರಾತ್ ಅಗ್ರಸ್ಥಾನ ಪಡೆದರೆ, ತಮಿಳುನಾಡು 3ನೇ ಸ್ಥಾನ ಪಡೆದುಕೊಂಡಿದೆ.

Ad
300x250 2

ನವದೆಹಲಿಯಲ್ಲಿ ಶನಿವಾರ ನಡೆದ ‘ಗ್ಲೋಬಲ್ ವಿಂಡ್ ಡೇ’ 2024″ ಪವನ್-ಉರ್ಜಾ ಪವರ್ನಿಂಗ್ ದಿ ಫ್ಯೂಚರ್ ಆಫ್ ಇಂಡಿಯಾ ಸಮಾರಂಭದಲ್ಲಿ ಹೊಸ ಮತ್ತು ನವೀಕರಿಸಬಹುದಾದ ಇಂಧನ ಇಲಾಖೆಯ ರಾಜ್ಯ ಸಚಿವರಾದ ಶ್ರೀಪಾದ್ ಯೆಸ್ಸೋ ನಾಯಕ್ ಅವರಿಂದ ಕ್ರೆಡಲ್ ವ್ಯವಸ್ಥಾಪಕ ನಿರ್ದೇಶಕ ಕೆ.ಪಿ ರುದ್ರಪಯ್ಯ ಪ್ರಶಸ್ತಿ ಸ್ವೀಕರಿಸಿದರು.

ಇಂಧನ ಸಚಿವ ಕೆ.ಜೆ. ಜಾರ್ಜ್ ಸಂತಸ ಅತ್ಯಧಿಕ ಪವನ ವಿದ್ಯುತ್ ಸಾಮರ್ಥ್ಯಕ್ಕಾಗಿ ಕರ್ನಾಟಕಕ್ಕೆ ಸಂದಿರುವ ಪ್ರಶಸ್ತಿ ಬಗ್ಗೆ ಸಂತಸ ವ್ಯಕ್ತಪಡಿಸಿರುವ ಇಂಧನ ಸಚಿವ ಕೆ.ಜೆ. ಜಾರ್ಜ್, ಈ ಪ್ರಶಸ್ತಿಯು ನವೀಕರಿಸಬಹುದಾದದ ಇಂಧನ ವಲಯದಲ್ಲಿನ ನಮ್ಮ ಬದ್ಧತೆಯನ್ನು ಹೆಚ್ಚಿಸಿದೆ. ಈ ಸಾಧನೆ ಹಿಂದೆ ಕ್ರೆಡಲ್ ಅಧಿಕಾರಗಳ ಶ್ರಮವಿದ್ದು, ಅವರಿಗೆ ಹೃತ್ಪೂರ್ವಕ ಅಭಿನಂದನೆ ಸಲ್ಲಿಸುತ್ತೇನೆ ಎಂದಿದ್ದಾರೆ.

ವಿದ್ಯುತ್ ಉತ್ಪಾದನಾ ವಲಯದಲ್ಲಿ ನವೀಕರಿಸಬಹುದಾದ ಇಂಧನದ ಪಾಲನ್ನು ಹೆಚ್ಚಿಸುವತ್ತ ರಾಜ್ಯ ಸರ್ಕಾರ ಗಮನಹರಿಸಿದೆ. ಹವಾಮಾನ ಬದಲಾವಣೆ ಮತ್ತು ಜಾಗತಿಕ ತಾಪಮಾನದ ಸವಾಲುಗಳನ್ನು ಎದುರಿಸುವಲ್ಲಿ ಇಂಧನ ಸಂರಕ್ಷಣೆ ನಿರ್ಣಾಯಕ ಪಾತ್ರ ವಹಿಸುತ್ತದೆ. ನಮ್ಮ ಇಲಾಖೆಯು ಇಂಧನ ಸಂರಕ್ಷಣೆ, ಸ್ವಚ್ಛ ಮತ್ತು ಹಸಿರು ಇಂಧನ ಉಪಕ್ರಮಗಳಿಗೆ ಒತ್ತು ನೀಡುತ್ತದೆ ಎಂದು ಸಚಿವರು ತಿಳಿಸಿದ್ದಾರೆ.

Ad
Ad
Nk Channel Final 21 09 2023
Ad